ಮುಂಬೈ(ಮಹಾರಾಷ್ಟ್ರ):ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಅಂತಿಮ ಹಂತಕ್ಕೆ ಬಂದು ನಿಂತಿದೆ. ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಯಲಿದ್ದು ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಅವರು ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ ಅವರಿಗೆ ಕರೆ ಮಾಡಿ, ಬೆಂಬಲ ಕೋರಿದ್ದಾರೆ.
ಮಹಾವಿಕಾಸ್ ಅಘಾಡಿ ಮೈತ್ರಿ ಸರ್ಕಾರ ವಿಶ್ವಾಸಮತ ಕಳೆದುಕೊಂಡಿರುವ ಕಾರಣ ಬಹುಮತ ಸಾಬೀತು ಪ್ರಕ್ರಿಯೆ ನಡೆಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ಅವರು ರಾಜ್ ಠಾಕ್ರೆ ಜೊತೆ ದೂರವಾಣಿ ಮೂಲಕ ಮಾತನಾಡಿ, ವಿಶ್ವಾಸಮತಯಾಚನೆ ವೇಳೆ ತಮಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೆ ಠಾಕ್ರೆ ಸಹಮತ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎಂಎನ್‌ಎಸ್ ಓರ್ವ ಶಾಸಕನನ್ನು ಹೊಂದಿದೆ.