ಸೆರಾಂಪೋರ್ (ಪಶ್ಚಿಮ ಬಂಗಾಳ): ಲೋಕಸಭಾ ಪ್ರವಾಸ ಯೋಜನೆ ಕಾರ್ಯಕ್ರಮದಡಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದಾರೆ. ಅವರು ಸೆರಾಂಪೋರ್ ಲೋಕಸಭೆ ಕ್ಷೇತ್ರದ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು, ಇಲ್ಲಿನ ರೈಲು ನಿಲ್ದಾಣವನ್ನು ಮಹೇಶ್ ಜಗನ್ನಾಥ ದೇವಾಲಯದ ಮಾದರಿಯಲ್ಲಿ ನಿರ್ಮಾಣ ಮಾಡಬೇಕು ಎಂದು ಆಡಳಿತ ಮಂಡಳಿಯು ಮನವಿ ಮಾಡಿದೆ.
ಸೋಮವಾರದಿಂದ ಸೆರಾಂಪೋರ್ ಪ್ರವಾಸದಲ್ಲಿರುವ ಸಚಿವ ಸ್ಮೃತಿ ಇರಾನಿ ಅವರನ್ನು ಮಹೇಶ್ ಜಗನ್ನಾಥ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಭೇಟಿ ಮಾಡಿ, ರೈಲ್ವೆ ನಿಲ್ದಾಣ ಬಗ್ಗೆ ಮಾತುಕತೆ ನಡೆಸಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಹೀಗಾಗಿ ರೈಲ್ವೆ ಇಲಾಖೆಯೊಂದಿಗೆ ಮಾತುಕತೆ ನಡೆಸುವಂತೆ ಎಂದು ಸಚಿವರ ಗಮನ ಸೆಳೆದರು.