ಶ್ರೀನಗರ(ಜಮ್ಮು ಕಾಶ್ಮೀರ):ಕಾರಾಗೃಹದ ಮಹಾನಿರ್ದೇಶಕಾರದ ಹೇಮಂತ್ ಕುಮಾರ್ ಲೋಹಿಯಾ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪಿ ಮನೆಕೆಲಸಗಾರನನ್ನು ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ರಾತ್ರಿಯಿಡೀ ನಡೆಸಿದ ಕಾರ್ಯಾಚರಣೆಯಲ್ಲಿ (ಡಿಜಿ ಕಾರಾಗೃಹಗಳು) ಎಚ್ ಕೆ ಲೋಹಿಯಾ ಅವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಬಂಧಿಸಿದ್ದು, ವಿಚಾರಣೆ ಆರಂಭಿಸಲಾಗಿದೆ ಎಂದು ಜಮ್ಮುವಿನ ಎಡಿಜಿಪಿ ಮುಖೇಶ್ ಸಿಂಗ್ ಟ್ವೀಟ್ ಮಾಡಿದ್ದಾರೆ.