ನವದೆಹಲಿ : ಉತ್ತರಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್ ಯಾದವ್ ಭರ್ಜರಿ ಗೆಲುವು ದಾಖಲಿಸಿದ್ದು, ಇಂದು ಲೋಕಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ಸಂಸದೆ ಡಿಂಪಲ್ ಯಾದವ್ ಅವರು ಪತಿ ಮತ್ತು ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಜೊತೆ ಸಂಸತ್ ಭವನಕ್ಕೆ ಆಗಮಿಸಿದ್ದರು.
ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ನಿಧನದ ನಂತರ ತೆರವಾಗಿದ್ದ ಮೈನ್‌ಪುರಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಡಿಂಪಲ್ ಯಾದವ್ ಅವರು ಬಿಜೆಪಿ ಅಭ್ಯರ್ಥಿ ರಘುರಾಜ್ ಸಿಂಗ್ ಶಾಕ್ಯಾ ಅವರನ್ನು ಸುಮಾರು 2,88,461 ಮತಗಳ ಅಂತರದಿಂದ ಸೋಲಿಸಿದ್ದರು. ಡಿಂಪಲ್ ಯಾದವ್ 6,18,120 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಕೇವಲ 3,29,659 ಮತಗಳನ್ನು ಪಡೆದು ಪರಾಭವಗೊಂಡರು.