ಕೊರ್ಬಾ(ಛತ್ತೀಸ್ಗಢ):ಇಂದುಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸಕ್ಕೆ ಏಳು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಛತ್ತೀಸ್ಗಢದ ಕೊರ್ಬಾ ಎಂಬಲ್ಲಿ ನಡೆದಿದೆ. ಇಲ್ಲಿನ ಪಾಂಡಿ ಉಪೋರ್ಡಾ ರಾಷ್ಟ್ರೀಯ ಹೆದ್ದಾರಿ 130ರಲ್ಲಿ ಅಪಘಾತ ಸಂಭವಿಸಿತು.
ಇದನ್ನೂ ಓದಿ:ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿ ಹೊಡೆದ ಕಾರು.. ಒಂದೇ ಕುಟುಂಬದ ನಾಲ್ವರು ಸಾವು
ವೇಗವಾಗಿ ಚಲಿಸುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅನೇಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಖಾಸಗಿ ಟ್ರಾವೆಲ್ಸ್ಗೆ ಸೇರಿದ್ದ ಬಸ್ ಛತ್ತೀಸ್ಗಢ ರಾಜಧಾನಿ ರಾಯ್ಪುರದಿಂಧ ಸರ್ಗುಜ್ಗೆ ತೆರಳುತ್ತಿತ್ತು. ಬೆಳಗ್ಗೆ 4 ಗಂಟೆ ವೇಳೆಗೆ ಬಂಗೋ ಪೊಲೀಸ್ ಠಾಣಾ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಈ ಅವಘಡ ಸಂಭವಿಸಿದೆ.