ಉಧಂಪುರ(ಜಮ್ಮು-ಕಾಶ್ಮೀರ):ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 48 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನ ಜಮ್ಮು-ಕಾಶ್ಮೀರ್ ಆಸ್ಪತ್ರೆಗೆ ಸಾಗಿಸಲಾಗಿದೆ.
ವೇಗವಾಗಿ ಚಲ್ಲಿಸುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡ ತೆಹಸಿಲ್ ಎಂಬಲ್ಲಿ ಆಳವಾದ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಈ ಘಟನೆ ನಡೆದಿದೆ. ಸ್ಥಳದಲ್ಲಿ ಭರದ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಉಧಮ್ಪುರದಿಂದ ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಈ ಬಸ್ ತೆರಳುತ್ತಿತ್ತು ಎನ್ನಲಾಗಿದೆ. ಘಟನೆಯಲ್ಲಿ 48 ಮಂದಿ ಗಾಯಗೊಂಡಿದ್ದಾರೆ. ಅತಿವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.