ಕೋಲ್ಕತ್ತಾ(ಪಶ್ಚಿಮ ಬಂಗಾಳ) ಜುಲೈ 19 ರಂದು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಮಂಗೋಳ ಪೊಲೀಸ್ ಠಾಣೆ ವ್ಯಾಪ್ತಿಯ ಪಕುವಾ ಹ್ಯಾಟ್ ಪ್ರದೇಶದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರಿಗೆ ಮತ್ತೊಂದು ಗುಂಪಿನ ಮಹಿಳೆಯರು ವಿವಸ್ತ್ರಗೊಳಿಸಿ, ಚಿತ್ರಹಿಂಸೆ ನೀಡಿ ತೀವ್ರ ಥಳಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವೀಡಿಯೊ ಕ್ಲಿಪ್‌ಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಕುಮಾರ್ ಯಾದವ್ ತಿಳಿಸಿದ್ದಾರೆ.
ಸಂತ್ರಸ್ತ ಇಬ್ಬರು ಮಹಿಳೆಯರು ಪರಿಶಿಷ್ಟ ಜಾತಿಗೆ ಸೇರಿದವರು. ಅವರ ಮೇಲೆ ದಾಳಿ ಮಾಡಿದ ಮಹಿಳೆಯರು ಸಹ ಪರಿಶಿಷ್ಟ ಪಂಗಡದವರು ಆಗಿದ್ದಾರೆ. ವಿವಸ್ತ್ರಗೊಳಿಸಿ, ಚಿತ್ರಹಿಂಸೆ ನೀಡಿ ತೀವ್ರ ಥಳಿಸಿರುವ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಂದ ನಿರ್ಲಕ್ಷ್ಯ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಇಬ್ಬರು ಸಂತ್ರಸ್ತ ಮಹಿಳೆಯರನ್ನು ಬಂಧಿಸಿದ್ದು ಏಕೆ ?: ಬಾಮಂಗೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಂತ್ರಸ್ತ ಇಬ್ಬರು ಮಹಿಳೆಯರು ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವ ಪುರಾವೆ ಸಿಕ್ಕ ಹಿನ್ನೆಲೆ ಬಂಧಿಸಲಾಗಿದೆ. ಇದಲ್ಲದೇ ನಾಲಗೋಳ ಚೆಕ್ಪೊಸ್ಟ್ ಧ್ವಂಸ ಕೃತ್ಯದಲ್ಲಿ ಈ ಇಬ್ಬರು ಮಹಿಳೆಯರು ಭಾಗಿಯಾಗಿದ್ದರು. ಈ ವೇಳೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿತ್ತು. ಈ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ.
ಆದಿವಾಸಿ ಮಹಿಳೆಯರಿಗೆ ಕಿರುಕುಳ ಆರೋಪ ಐವರ ಬಂಧನ:ಇಬ್ಬರು ಆದಿವಾಸಿ ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದಡಿ ಬಂಧಿತ ಐವರ ಜತೆಗೆ ಇನ್ನೂ ಕೆಲವರು ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಅವರನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ.