ನವದೆಹಲಿ: ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ಇನ್ನು ಶಶಿ ತರೂರ್ ಸಹ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮೂರು ಗಂಟೆ ಒಳಗೆ ಎಲ್ಲರೂ ನಾಮಪತ್ರ ಸಲ್ಲಿಸಬೇಕಿದೆ.
ಇದಕ್ಕೂ ಮುನ್ನ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದ ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಈ ರೇಸ್‌ನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಉಳಿದಿದ್ದು, ಅವರು ಸಹ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ದೆಹಲಿಯ ಎಐಸಿಸಿ ಕಚೇರಿಗೆ ತೆರಳಿದ್ದ ಮಲ್ಲಿಕಾರ್ಜುನ ಖರ್ಗೆ ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದರು.