ಬೆಂಗಳೂರು/ನವದೆಹಲಿ :ಪ್ರಸ್ತುತ ಅಂದರೆ, 2019ರ ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಕಣಿವೆ ನಾಡಿನ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒಂದಿಷ್ಟು ಅಂಕಿ-ಅಂಶಗಳನ್ನ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
"ಬಿಜೆಪಿ ಆಡಳಿತದಲ್ಲಿ ಜಮ್ಮು ಮತ್ತು ಕಾಶ್ಮೀರವು ಎಲ್ಲ ರಾಜ್ಯಗಳಿಗಿಂತಲೂ ಅತಿ ಹೆಚ್ಚು ನಿರುದ್ಯೋಗ ದರ (ಶೇ.21.6) ಹೊಂದಿದೆ. ಸ್ಥಳೀಯರು, ಸ್ಥಳೀಯ ಅಲ್ಪಸಂಖ್ಯಾತರು ಮತ್ತು ಇತರ ರಾಜ್ಯಗಳಿಂದ ವಲಸೆ ಬಂದವರು ಸೇರಿದಂತೆ ಕನಿಷ್ಠ 30 ನಾಗರಿಕರು ಈ ವರ್ಷ ಭಯೋತ್ಪಾದಕರಿಂದ ಕೊಲ್ಲಲ್ಪಟ್ಟಿದ್ದಾರೆ. ಕಳೆದ ವಾರ 9 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ" ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.