ಕೋಲ್ಕತ್ತಾ(ಪಶ್ಚಿಮ ಬಂಗಾಳ): ಜುಲೈ 27ರಿಂದ ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದೇ ಮೊದಲ ಸಲ ಪ್ರಧಾನಿ ಮೋದಿ ಭೇಟಿ ಮಾಡ್ತಿದ್ದು, ಹೆಚ್ಚು ಕುತೂಹಲ ಮೂಡಿಸಿದೆ.
ಪಶ್ಚಿಮ ಬಂಗಾಳ ವಿಧಾನಸಭೆ, ಕೋವಿಡ್ ಹಾಗೂ ಯಾಸ್ ಚಂಡಮಾರುತದ ಸಂದರ್ಭದಲ್ಲಿ ನಮೋ ವಿರುದ್ಧ ವಾಗ್ದಾಳಿ ನಡೆಸಿದ್ದ ಮಮತಾ ಬ್ಯಾನರ್ಜಿ, ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಪರೆನ್ಸ್ ಸಭೆಗಳಿಂದಲೂ ಹೊರಗುಳಿದಿದ್ದರು. ಆದರೆ ಇದೇ ಮೊದಲ ಸಲ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ದೀದಿ, 2-3 ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಅವರನ್ನ ಭೇಟಿ ಮಾಡಲು ಸಮಯಾವಕಾಶ ಸಿಕ್ಕಿದೆ. ಈ ವೇಳೆ ಬೇರೆ ಬೇರೆ ಪಕ್ಷದ ಮುಖಂಡರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.