ಕೋಲ್ಕತ್ತಾ:ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಿಂದ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅವರು ಸೆಪ್ಟೆಂಬರ್ 10ರಂದು ನಾಮಪತ್ರ ಸಲ್ಲಿಕೆ ಮಾಡುವುದಾಗಿ ಟಿಎಂಸಿ ಘೋಷಿಸಿದೆ.
ಕಳೆದ ಎರಡು ತಿಂಗಳ ಹಿಂದೆ ನಡೆದಿದ್ದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಪರಾಭವಗೊಂಡಿದ್ದರು. ಆದಾಗ್ಯೂ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಇದೀಗ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಈ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.