ಕರ್ನಾಟಕ

karnataka

ETV Bharat / bharat

ಬೈ ಎಲೆಕ್ಷನ್: ಭವಾನಿಪುರ ಕ್ಷೇತ್ರದಿಂದ ಸಿಎಂ ಮಮತಾ ಬ್ಯಾನರ್ಜಿ ನಾಮಿನೇಷನ್ - ಪಶ್ಚಿಮ ಬಂಗಾಳ ಉಪಚುನಾವಣೆ

ಕಳೆದ ಕೆಲ ತಿಂಗಳ ಹಿಂದೆ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡಿದ್ದ ಸಿಎಂ ಮಮತಾ ಬ್ಯಾನರ್ಜಿ ಇದೀಗ ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಇಂದು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.

ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

By

Published : Sep 10, 2021, 9:12 AM IST

Updated : Sep 10, 2021, 2:31 PM IST

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ, ಶಿಷ್ಯ ಸುವೆಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದರು. ಈ ಹಿನ್ನೆಲೆ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆಪ್ಟೆಂಬರ್ 30 ರಂದು ನಡೆಯುತ್ತಿರುವ ಬೈ ಎಲೆಕ್ಷನ್​ನಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಅಕ್ಟೋಬರ್‌ 3ರಂದು ಫಲಿತಾಂಶ ಹೊರ ಬೀಳಲಿದೆ.

Last Updated : Sep 10, 2021, 2:31 PM IST

ABOUT THE AUTHOR

...view details