ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ರಾಜ್ಯದಲ್ಲಿ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡಲಿದೆ.
292 ಕ್ಷೇತ್ರಗಳ ಪೈಕಿ 217 ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವು ದಾಖಲು ಮಾಡಿದ್ದು, ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ಮೇ 5ರಂದು ಮಮತಾ ಬ್ಯಾನರ್ಜಿ ಮತ್ತೊಂದು ಅವಧಿಗೆ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಇಂದು ನಡೆದ ಟಿಎಂಸಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಶಾಸಕಾಂಗ ಪಕ್ಷದ ಮುಖಂಡೆಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ಮತ್ತೊಂದು ಅವಧಿಗೆ ಸಿಎಂ ಆಗಲಿದ್ದಾರೆ. ಆದರೆ ಮೇ 6ರಂದು ಕ್ಯಾಬಿನೆಟ್ ವಿಸ್ತರಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.