ಕೋಲ್ಕತಾ(ಪಶ್ಚಿಮಬಂಗಾಳ) :ಕೊರೊನಾ ಲಸಿಕೆಗಳನ್ನು ಖರೀದಿಸುವ ಸಂಬಂಧ ಮತ್ತು ಮುಂದಿನ ವಿಧಾನಸಭಾ ಚುನಾವಣೆಗಳನ್ನು ಸುರಕ್ಷಿತವಾಗಿ ನಡೆಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮವನ್ನು ಶ್ರದ್ಧೆಯಿಂದ ನಿರ್ವಹಿಸಲಾಗುತ್ತದೆ. ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ, ಪೊಲೀಸ್ ಸಿಬ್ಬಂದಿಗೆ, ಮುನ್ಸಿಪಲ್ ಸಿಬ್ಬಂದಿಗೆ, ಮುಂತಾದವರಿಗೆ ಶೀಘ್ರವಾಗಿ ಲಸಿಕೆ ಹಾಕಲಾಗುತ್ತಿದೆ ಎಂದಿದ್ದಾರೆ.
ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯನ್ನು ಸುರಕ್ಷಿತವಾಗಿ ನಡೆಸಲು ಸಿಬ್ಬಂದಿ ಒದಗಿಸಬೇಕೆಂದು ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.