ಕೋಲ್ಕತಾ:ನಾರದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ರಾಜ್ಯದಿಂದ ವರ್ಗಾವಣೆ ಮಾಡುವಂತೆ ಕೋರಿ ಕೋಲ್ಕತ್ತಾ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲೊಯ್ ಘಟಕ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.
ಆ್ಯಕ್ಟಿಂಗ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ನೇತೃತ್ವದ ವಿಭಾಗೀಯ ಪೀಠವು ಇಂದು ಅರ್ಜಿ ವಿಚಾರಣೆ ನಡೆಸಲು ನಿರ್ಧರಿಸಿದೆ.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಟಿಎಂಸಿ ಶಾಸಕ ಮದನ್ ಮಿತ್ರ ಮತ್ತು ಕೋಲ್ಕತಾ ಮಾಜಿ ಮೇಯರ್ ಸೋವನ್ ಚಟರ್ಜಿ ಅವರು ತಮ್ಮ ಜಾಮೀನಿಗೆ ನೀಡಿರುವ ತಡೆಯಾಜ್ಞೆಯನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಇದೇ ನ್ಯಾಯಪೀಠ ಸೋಮವಾರದಂದು ವಿಚಾರಣೆ ನಡೆಸಲಿದೆ.