ಕೋಲ್ಕತಾ: ಕೇಂದ್ರ ವಿವಾದಿತ 3 ಕೃಷಿ ಕಾನೂನುಗಳನ್ನ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿ ಗಡಿಯಲ್ಲಿ ದೊಡ್ಡ ಹೋರಾಟವನ್ನೇ ನಡೆಸ್ತಿದ್ದಾರೆ. ಇದರ ಮಧ್ಯೆ ಈಗ ಪಶ್ಟಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಶೀಘ್ರದಲ್ಲಿಯೇ ಅಧಿವೇಶನ ನಡೆಸೋದಾಗಿ ಹೇಳಿದ್ದಾರೆ.
ಒಂದು ವೇಳೆ ರೈತರು ಈ ವಿವಾದಾತ್ಮಕ ಕೃಷಿ ಕಾನೂನುಗಳಿಂದ ಪ್ರಯೋಜನ ಪಡೆದ್ರೆ, ಬಂಗಾಳದಲ್ಲಿ ಪಿಎಂ-ಕಿಸಾನ್ ಯೋಜನೆಯನ್ನು ಜಾರಿಗೆ ತರಲು ತಾನು ಸಿದ್ಧ ಎಂದು ಹೇಳಿಕೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ:ರೈತರ ವಿರುದ್ಧ ಮಮತಾ ತೆಗೆದುಕೊಂಡ ನಿರ್ಧಾರ ನೋವು ತಂದಿದೆ: ಮೋದಿ