ಕರ್ನಾಟಕ

karnataka

ETV Bharat / bharat

‘ಮಹಾ ಮೀಟ್’​..  ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮುಂದಿನ ವಾರ ಪ್ರಧಾನಿ ಭೇಟಿ ಸಾಧ್ಯತೆ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ(West bengal cm Mamata Banerjee)ಅವರು ನವೆಂಬರ್​ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ(Prime minister Narendra modi) ಅವರನ್ನು ಭೇಟಿ ಮಾಡುವ ಸಾಧ್ಯತೆ(likely to meet)ಇದೆ. ಈ ಭೇಟಿ ರಾಜಕೀಯವಾಗಿ ಭಾರೀ ಮಹತ್ವ ಪಡೆದುಕೊಳ್ಳಲಿದೆ ಎಂದೇ ಹೇಳಲಾಗಿದೆ.

mamata likely to meet modi
ಮಮತಾ ಪ್ರಧಾನಿ ಭೇಟಿ ಸಾಧ್ಯತೆ

By

Published : Nov 16, 2021, 1:27 PM IST

ಕೋಲ್ಕತ್ತಾ:ರಾಜಕೀಯ ಬದ್ಧ ವೈರಿಗಳಂತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Prime minister Narendra modi) ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal cm Mamata Banerjee)ಅವರು ನವೆಂಬರ್​ 25ರಂದು ಎದುರಾಗುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನವೆಂಬರ್​ 22 ರಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ವೇಳೆ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಪಶ್ಚಿಮ ಬಂಗಾಳಕ್ಕೆ ಬರಬೇಕಾದ ಬಾಕಿ ತೆರಿಗೆ ಹಣ ಮತ್ತು ಬಿಎಸ್​ಎಫ್​ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆಯ ಬಗ್ಗೆ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹೀಗಾಗಿ ಈ ಭೇಟಿ ರಾಜಕೀಯವಾಗಿ ಭಾರೀ ಮಹತ್ವ ಪಡೆದುಕೊಳ್ಳಲಿದೆ ಎಂದೇ ಹೇಳಲಾಗಿದೆ. ಇದೇ ವೇಳೆ ಕಾಂಗ್ರೆಸ್​ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಪಶ್ಚಿಮ ಬಂಗಾಳ, ಪಂಜಾಬ್​, ಅಸ್ಸೋಂ ಅಂತಾರಾಷ್ಟ್ರೀಯ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದ ಉಪಟಳವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಿಎಸ್​ಎಫ್​ ಕಾರ್ಯಾಚರಣೆ ವ್ಯಾಪ್ತಿಯನ್ನು 15 ಕಿ.ಮೀ. ಬದಲಾಗಿ 50 ಕಿ.ಮೀಗೆ ಹೆಚ್ಚಿಸಿತ್ತು. ಇದು ಆಯಾ ರಾಜ್ಯ ಸರ್ಕಾರಗಳ ಸಾರ್ವಭೌಮತ್ವದ ಪ್ರಶ್ನೆಯನ್ನು ಹುಟ್ಟುಹಾಕಿದ್ದು, ಕೇಂದ್ರದ ನಿರ್ಧಾರದ ವಿರುದ್ಧ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಹಿಂದೆ ಪ್ರಧಾನಿಗೆ ಪತ್ರ ಬರೆದಿದ್ದರು. ಅಲ್ಲದೇ, ವಿಧಾನಸಭೆಯಲ್ಲಿ ಈ ನಿರ್ಧಾರದ ವಿರುದ್ಧ ನಿರ್ಣಯ ತರಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದೆ.

ಮುಂದುವರಿದು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಕ್ಷದ ನಾಯಕರು ಇದರ ವಿರುದ್ಧ ಧ್ವನಿ ಎತ್ತಲು ಸಿದ್ಧತೆ ನಡೆಸಿದ್ದಾರೆ. ಇದರ ಮಧ್ಯೆಯೇ ಮೋದಿ ಮತ್ತು ಮಮತಾರ ಭೇಟಿ ಮಾಡಲಿದ್ದು, ರಾಜಕೀಯವಾಗಿ ಮಹತ್ವ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ABOUT THE AUTHOR

...view details