ಕೋಲ್ಕತ್ತಾ:ಇಂದು ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ಪಿಎಂ ಜೊತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ತೀರಾ ಕಡಿಮೆಯಿದೆ ಎಂದು ರಾಜ್ಯ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ ಅವರು ಗೈರಾದರೆ ಅದಕ್ಕೆ ನಿಖರವಾದ ಕಾರಣವಿಲ್ಲ. ಆದರೆ ಜನವರಿ 23 ರಂದು ಜೈ ಶ್ರೀರಾಮ್ ಘೋಷಣೆ ಕೂಗಿ ಮಾಡಿದ ಅಪಮಾನ ಕಾರಣವಾಗಬಹುದು ಎಂದು ಸಚಿವಾಲಯದ ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ: ನಮೋ ಸ್ವಾಗತಕ್ಕೆ ಮದುವಣಗಿತ್ತಿಯಂತೆ ಸಜ್ಜಾದ ಹಲ್ಡಿಯಾ
ಸುಭಾಷ್ ಚಂದ್ರ ಬೋಸ್ ಜನ್ಮದಿನದ ನಿಮಿತ್ತ ಕೋಲ್ಕತ್ತಾದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ದೀದಿ ಭಾಷಣ ಮಾಡುವ ವೇಳೆ ನೆರೆದಿದ್ದ ಕೆಲವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಸರ್ಕಾರಿ ಕಾರ್ಯಕ್ರಮದಲ್ಲಿ ಹೀಗೆ ಘೋಷಣೆ ಕೂಗಿದ್ದಕ್ಕೆ ಆಕ್ರೋಶಗೊಂಡ ಮಮತಾ ಬ್ಯಾನರ್ಜಿ ಜೈ ಹಿಂದ್, ಜೈ ಬಾಂಗ್ಲಾ ಎಂದು ಹೇಳಿ ಸಭೆಯಿಂದ ಹೊರನಡೆದಿದ್ದರು.
ಪಶ್ಚಿಮ ಬಂಗಾಳದ ಪುರ್ಬಾ ಮದಿನಿಪುರ ಜಿಲ್ಲೆಯ ಹಲ್ಡಿಯಾದಲ್ಲಿ ನಾಲ್ಕು ಯೋಜನೆಗಳನ್ನು ಪಿಎಂ ಮೋದಿ ಇಂದು ಸಂಜೆ ಉದ್ಘಾಟಿಸಲಿದ್ದಾರೆ.