ಕೋಲ್ಕತ್ತಾ (ಪಶ್ಚಿಮ ಬಂಗಾಳ): ಕೊರೊನಾ ಪರಿಸ್ಥಿತಿ ಬಿಗಡಾಯಿಸಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಿಗದಿಯಾಗಿದ್ದ ಪಶ್ಚಿಮ ಬಂಗಾಳ ಭೇಟಿಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ರಾಜ್ಯದಲ್ಲಿ ನಡೆಸಬೇಕೆಂದಿದ್ದ ಎಲ್ಲಾ ರ‍್ಯಾಲಿ, ಸಭೆಗಳನ್ನು ರದ್ದುಗೊಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ದೀದಿ, "ದೇಶಾದ್ಯಂತ ಕೊರೊನಾ ಹೆಚ್ಚುತ್ತಿರುವ ಹಾಗೂ ಏಪ್ರಿಲ್ 22ರ ಚುನಾವಣಾ ಆಯೋಗದ ಆದೇಶದ ಹಿನ್ನೆಲೆ ನನ್ನ ಪೂರ್ವ ನಿಗದಿತ ಎಲ್ಲಾ ಚುನಾವಣಾ ಸಭೆಗಳನ್ನು ರದ್ದುಗೊಳಿಸುತ್ತಿದ್ದು, ವರ್ಚುವಲ್ ಮೂಲಕವೇ ಜನರನ್ನ ತಲುಪಲಿದ್ದೇವೆ. ವರ್ಚುವಲ್ ಸಭೆಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ" ಎಂದು ಹೇಳಿದ್ದಾರೆ.