ಕರ್ನಾಟಕ

karnataka

ETV Bharat / bharat

ಮಮತಾ ಪಾದ ಮತ್ತು ಭುಜಕ್ಕೆ ಗಂಭೀರ ಗಾಯಗಳಾಗಿವೆ: ಮಾಹಿತಿ ನೀಡಿದ ವೈದ್ಯರು

ನಂದಿಗ್ರಾಮದಲ್ಲಿ ಪ್ರಚಾರಕ್ಕೆಂದು ತೆರಳಿದ್ದ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ತೀವ್ರವಾಗಿ ಗಾಯಗೊಂಡಿದ್ದರು. ಅವರು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪ್ರಾಥಮಿಕ ವರದಿ ಇದೀಗ ಬಹಿರಂಗವಾಗಿದೆ.

ಮಮತಾ ಬ್ಯಾನರ್ಜಿ
Mamata Banerjee

By

Published : Mar 11, 2021, 7:53 AM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ):ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಎಡ ಕಾಲು ಮತ್ತು ಪಾದದ ಮೇಲೆ ತೀವ್ರವಾದ ಗಾಯಗಳಾಗಿದ್ದು, ಭುಜ, ಕುತ್ತಿಗೆ, ಮುಂದೋಳಿನಲ್ಲಿ ಗಾಯಗಳಾಗಿವೆ ಎಂದು ಆಸ್ಪತ್ರೆಗೆ ವೈದ್ಯರು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ.

ಈ ಕುರಿತಂತೆ ಎಸ್‌ಎಸ್‌ಕೆಎಂ ಆಸ್ಪತ್ರೆಯ ಡಾ.ಎಂ.ಬಂಡೋಪಾಧ್ಯಾಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಆರಂಭಿಕ ಪರೀಕ್ಷೆಯಲ್ಲಿ ಎಡಗಾಲು ಮತ್ತು ಪಾದದಲ್ಲಿ ತೀವ್ರ ಪೆಟ್ಟು ಬಿದ್ದಿದೆ. ಇದರ ಜೊತೆಗೆ ಭುಜ, ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ. ಎದೆ ನೋವು, ಉಸಿರಾಟದ ಸಮಸ್ಯೆ ಇರುವ ಬಗ್ಗೆ ಬ್ಯಾನರ್ಜಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು 48 ಗಂಟೆಗಳ ಕಾಲ ನಿಗಾದಲ್ಲ ಇರಿಸಲಾಗಿದೆ ಎಂದರು.

ಓದಿ: ಸೋದರತ್ತೆಗೆ ಗಂಭೀರ ಗಾಯವಾಗಿದೆ: ಅಭಿಷೇಕ್

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ನಂದಿ ಗ್ರಾಮದಲ್ಲಿ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ನಡೆದ ತಳ್ಳಾಟದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಾಲಿಗೆ ಪೆಟ್ಟಾಗಿತ್ತು. ಕೂಡಲೇ ಅವರನ್ನು ನಂದಿಗ್ರಾಮ್‌ನಿಂದ ರಸ್ತೆ ಮೂಲಕ ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆ ತರಲಾಗಿತ್ತು.

ABOUT THE AUTHOR

...view details