ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ದೆಹಲಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಇಂದು ಸಂಜೆ 4 ಗಂಟೆ ಸುಮಾರಿಗೆ ಮೋದಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಜೊತೆಗೆ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರನ್ನೂ ಸಹ ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಇದೆ.
ಬಂಗಾಳದ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕುತೂಹಲಕ್ಕೂ ಕಾರಣವಾಗಿದೆ. ಇತ್ತ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನೂ ಸಹ ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಇವರಲ್ಲದೇ ಕಮಲ್ನಾಥ್, ಆನಂದ್ ಶರ್ಮಾ ಮತ್ತು ಅಭಿಷೇಕ್ ಮನು ಸಿಂಘ್ವಿಯನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. 2024ರ ಲೋಕಸಭೆ ಚುನಾವಣಾ ದೃಷ್ಟಿಯಿಂದ ಮಮತಾ ಬ್ಯಾನರ್ಜಿ ಭೇಟಿ ಇನ್ನಷ್ಟು ಮಹತ್ವ ಪಡೆದುಕೊಂಡಿದೆ.