ಕೋಲ್ಕತ್ತಾ:ಜನವರಿ 16ರಿಂದ ದೇಶಾದ್ಯಂತ ಕೋವಿಡ್ ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಅದಕ್ಕೂ ಮುಂಚಿತವಾಗಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಇಂದು ಮೋದಿ ಮಹತ್ವದ ಸಭೆ ನಡೆಸಿದರು.
ಕೋವಿಡ್ ಲಸಿಕೆ ಖರೀದಿ ಒಪ್ಪಂದಕ್ಕೆ ಕೇಂದ್ರ ಈಗಾಗಲೇ ಸಹಿ ಹಾಕಿದ್ದು, ಆರಂಭದಲ್ಲಿ 11 ಮಿಲಿಯನ್ ಡೋಸ್ ವಿವಿಧ ರಾಜ್ಯಗಳಿಗೆ ರವಾನೆಯಾಗಲಿವೆ. ಇದೇ ವಿಚಾರವಾಗಿ ಮಾತನಾಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ನಾವು ಕೇಂದ್ರದ ಮಾರ್ಗಸೂಚಿ ಪಾಲಿಸುತ್ತೇವೆ ಎಂದಿದ್ದಾರೆ.