ಕರ್ನಾಟಕ

karnataka

By

Published : May 18, 2021, 4:39 PM IST

ETV Bharat / bharat

ಉತ್ತಮ ಆಡಳಿತಕ್ಕಾಗಿ ರಾಜ್ಯಪಾಲರ ಬದಲಾವಣೆ ಮಾಡಿ : ಪ್ರಧಾನಿಗೆ ಪತ್ರ ಬರೆದ ಮಮತಾ

ಪ್ರಮಾಣವಚನ ಸಮಾರಂಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಎತ್ತುವ ಮೂಲಕ ಮತ್ತು ಸಾರ್ವಜನಿಕ ವಲಯದಲ್ಲಿ ಟ್ವೀಟ್ ಮಾಡುವ ಮೂಲಕ ಧನ್ಖರ್ ಎಲ್ಲ ಮಿತಿಗಳನ್ನು ಮೀರುತ್ತಿದ್ದಾರೆ..

Mamata wants change of governor, writes to PM, President Aಶ( ನೇಷನ್ - ಟಾಪ್​)
Mamata wants change of governor, writes to PM, President Aಶ( ನೇಷನ್ - ಟಾಪ್​)

ಕೋಲ್ಕತಾ: ರಾಜ್ಯದಲ್ಲಿ ಉತ್ತಮ ಆಡಳಿತ ಹಿತದೃಷ್ಟಿಯಿಂದ ರಾಜ್ಯಪಾಲರನ್ನು ಬದಲಾಯಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಪತ್ರ ಬರೆದಿದ್ದಾರೆ.

ನಾರದ ಹಗರಣದಲ್ಲಿ ಇಬ್ಬರು ಮಂತ್ರಿಗಳು, ಮಾಜಿ ಸಚಿವರು ಮತ್ತು ಮಾಜಿ ಮೇಯರ್ ಸೇರಿದಂತೆ ನಾಲ್ವರು ತೃಣಮೂಲ ನಾಯಕರನ್ನು ಸಿಬಿಐ ಸೋಮವಾರ ಬಂಧಿಸಿದ ಕೂಡಲೇ ಈ ಪತ್ರ ಬರೆಯಲಾಗಿದೆ.

ಈ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ರಾಜ್ಯಪಾಲ ಜಗದೀಪ್ ಧಂಖರ್ ಸರ್ಕಾರದ ವಿರುದ್ಧ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲ ಧಂಖರ್ ಅವರು ಚುನಾವಣೆಯ ನಂತರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದ 'ಉತ್ಪ್ರೇಕ್ಷಿತ ಆವೃತ್ತಿಯನ್ನು' ಹೆಚ್ಚಿಸುತ್ತಿದ್ದಾರೆ ಎಂದಿದ್ದಾರೆ.

ಪಶ್ಚಿಮಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ ಹದಗೆಟ್ಟಿದೆ ಎಂಬುದನ್ನು ಪ್ರದರ್ಶಿಸುವುದೇ ಈ ಬೆಳವಣಿಗೆಯಾಗಿದೆ, ಆಯಾಮವಾಗಿದೆ. ಆಡಳಿತದ ನಿಯಂತ್ರಣವು ನಮ್ಮ ಕೈಯಲ್ಲಿ ಇಲ್ಲದಿದ್ದಾಗ ಈ ಘಟನೆಗಳು ಸಂಭವಿಸಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈಗ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಮತ್ತು ಆಡಳಿತವು ಕೋವಿಡ್ ವಿರುದ್ಧ ಹೋರಾಡುವಲ್ಲಿ ನಿರತವಾಗಿದೆ ಎಂದು ಮಮತಾ ಹೇಳಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಎತ್ತುವ ಮೂಲಕ ಮತ್ತು ಸಾರ್ವಜನಿಕ ವಲಯದಲ್ಲಿ ಟ್ವೀಟ್ ಮಾಡುವ ಮೂಲಕ ಧನ್ಖರ್ ಎಲ್ಲ ಮಿತಿಗಳನ್ನು ಮೀರುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯಪಾಲರನ್ನು ತೆಗೆದುಹಾಕುವಂತೆ ಒತ್ತಾಯಿಸಿ ವಿಧಾನಸಭೆ ಅಂಗೀಕರಿಸಿದ ನಿರ್ಣಯವನ್ನು ಪಕ್ಷ ಪರಿಗಣಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ತಿಳಿಸಿವೆ.

ABOUT THE AUTHOR

...view details