ಕೋಯಿಕ್ಕೋಡ್: ಇಲ್ಲಿನಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮಲಯಾಳಂ ಸಿನಿಮಾ ನಟ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಹಾಗೂ ಇತರ 300 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ರೋಬೋಟ್ ನೆರವಿನ ಶಸ್ತ್ರಚಿಕಿತ್ಸೆಯ ಸೇವೆಯ ಉದ್ಘಾಟನೆಗಾಗಿ ಇಬ್ಬರು ನಟರು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನ ಭಾಗವಹಿಸಿ ಕೋವಿಡ್ ನಿಯಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ವೇಳೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ನಾವು ಕೇರಳದ ಸಾಂಕ್ರಾಮಿಕ ರೋಗಗಳ ಕಾಯಿದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆಸ್ಪತ್ರೆಯ ಎಂಡಿ, ಸಿಒಒ ಮತ್ತು ಇತರರ ವಿರುದ್ದ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ 10,000 ದಂಡವನ್ನು ಒಳಗೊಂಡಿರುತ್ತದೆ ಎಂಬುದಾಗಿ ತಿಳಿದುಬಂದಿದೆ.
ಇದನ್ನೂ ಓದಿ:ಯಡಿಯೂರಪ್ಪ ಸಂಪುಟ ದರ್ಜೆ ಸ್ಥಾನಮಾನ ವಾಪಸ್ ನೀಡಿ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ : ಸಿದ್ದರಾಮಯ್ಯ