ಫುಲ್ಬಾನಿ (ಒಡಿಶಾ):ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯೊಬ್ಬನನ್ನು ಸಂತ್ರಸ್ತೆಯ ತಂದೆ ಹಾಗೂ ಚಿಕ್ಕಪ್ಪ ಹೊಡೆದು ಕೊಂದಿದ್ದಾರೆ. ನಂತರ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಹೇಳಿದ್ದೇನು?:ಜಿಲ್ಲಾ ಕೇಂದ್ರವಾದ ಫುಲ್ಬಾನಿಯಿಂದ ಸುಮಾರು 75 ಕಿಲೋ ಮೀಟರ್ ದೂರದಲ್ಲಿರುವ ರೈಕಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಬಾಲಕಿ ತನ್ನ ಮನೆಯ ಹೊರಗೆ ಇದ್ದಾಗ ಕಾಂಕ್ರಿಟ್ ಮಿಶ್ರಣ ಮಾಡುವ ಆಪರೇಟಿಂಗ್ ವ್ಯಕ್ತಿಯು, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಛತ್ತೀಸ್‌ಗಢ ನಿವಾಸಿಯಾಗಿದ್ದು, ಗುತ್ತಿಗೆ ಆಧಾರದ ಮೇಲೆ ಇಲ್ಲಿ ಕೆಲಸ ಮಾಡುತ್ತಿದ್ದ. ಘಟನೆಯಿಂದ ಆಕ್ರೋಶಗೊಂಡ ಬಾಲಕಿಯ ತಂದೆ ಮತ್ತು ಚಿಕ್ಕಪ್ಪ ಆರೋಪಿಯನ್ನು ದೊಣ್ಣೆಯಿಂದ ಹೊಡೆದು ಸ್ಥಳದಲ್ಲೇ ಕೊಂದಿದ್ದಾರೆ ಎಂದು ರೈಕಿಯಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಮಾಕಾಂತ್ ಪಾತ್ರ ಮಾಹಿತಿ ನೀಡಿದರು. ನಂತರ ಇಬ್ಬರು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ತಪ್ಪೊಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು. ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತನ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿ ಬಂಧನ:12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಇತ್ತೀಚೆಗೆ ಬಂಧಿಸಲಾಗಿದೆ. ಜುಲೈ 15ರಂದು 12 ವರ್ಷ 10 ತಿಂಗಳು ಪ್ರಾಯದ ಬಾಲಕಿಯು ತನ್ನ ತಾಯಿಯೊಂದಿಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ಈ ಕುರಿತು ದೂರು ಕೊಟ್ಟಿದ್ದರು.