ಮುಂಬೈ/ಮಹಾರಾಷ್ಟ್ರ :ಮುಂಬೈ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಸುಳ್ಳು ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬುಧವಾರ ಸಂಜೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ಮುಂಬೈ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ 10 ನಿಮಿಷಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಕೂಡಲೇ ಬಾಂಬ್ ಸ್ಕ್ವಾಡ್ ತಂಡದೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ನಡೆಸಿದಾಗ ಸ್ಥಳದಲ್ಲಿ ಏನೂ ಪತ್ತೆಯಾಗಿರಲಿಲ್ಲ.