ಕರ್ನಾಟಕ

karnataka

ETV Bharat / bharat

ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಜಮ್ಮು& ಕಾಶ್ಮೀರ ವ್ಯಕ್ತಿ ವಿರುದ್ಧ ಪ್ರಕರಣ - ಜಮ್ಮು ಕಾಶ್ಮೀರದ ವ್ಯಕ್ತಿ ವಿರುದ್ಧ ಪ್ರಕರಣ

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಶಿವಲಿಂಗಗಳ ಬಗ್ಗೆ ಬಶರತ್ ವಾನಿ ಎಂಬಾತ ಧರ್ಮ ನಿಂದನೆಯ ಕಾಮೆಂಟ್‌ ಮಾಡಿದ್ದಾರೆ ಎಂದು ದೂರುದಾರ ರಾಜೇಶ್ವರ್ ಆರೋಪಿಸಿದ್ದಾರೆ.

Jammu and Kashmir
ಸಾಂದರ್ಭಿಕ ಚಿತ್ರ

By

Published : May 31, 2022, 9:19 AM IST

ಬನಿಹಾಲ್:ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಹಿಂದೂಗಳ ಆರಾಧ್ಯದೈವ ಶಿವನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಸ್ತಿಗಢ ಪೊಲೀಸ್ ರಾಣೆಯಲ್ಲಿ ರಾಜೇಶ್ವರ್ ಎಂಬುವವರು ಲಿಖಿತ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಬಶರತ್ ವಾನಿ ಎಂಬಾತ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಶಿವಲಿಂಗಗಳ ಬಗ್ಗೆ ಧರ್ಮನಿಂದನೆಯ ಕಾಮೆಂಟ್‌ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದು ಎರಡು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತದೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ: ಆವಂತಿಪೊರಾ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ABOUT THE AUTHOR

...view details