ಕರ್ನಾಟಕ

karnataka

ETV Bharat / bharat

ಜಿಲ್ಲಾಸ್ಪತ್ರೆಯಲ್ಲಿ ಸಿಗದ ಸ್ಟ್ರೆಚರ್​​​: ಗರ್ಭಿಣಿ  ಹೆಗಲ ಮೇಲೆ ಹೊತ್ತು ಆಪರೇಷನ್​​​​​​​ ಕೋಣೆಗೆ  ಹೋದ ಪತಿ - ಆಸ್ಪತ್ರೆಯ ಸಿಬ್ಬಂದಿ ಸ್ಟ್ರೆಚರ್ ಒದಗಿಸಿಲ್ಲ

ಉತ್ತರ ಪ್ರದೇಶದ ಕೌಶಂಬಿ ಜಿಲ್ಲಾಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದ ಕಾರಣ ತುಂಬು ಗರ್ಭಿಣಿ ಪತ್ನಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

man-carries-pregnant-wife-on-his-shoulders-to-kaushambi-hospital-in-up
ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಬಂದರೂ ಸಿಗದ ಸ್ಟ್ರೆಚರ್ : ಗರ್ಭಿಣಿ ಪತ್ನಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ಪತಿ

By

Published : Sep 27, 2022, 3:21 PM IST

ಕೌಶಂಬಿ (ಉತ್ತರ ಪ್ರದೇಶ): ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟ್ರೆಚರ್​ ಸಿಗದ ಕಾರಣ ವ್ಯಕ್ತಿಯೊಬ್ಬ ತನ್ನ ತುಂಬು ಗರ್ಭಿಣಿ ಪತ್ನಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಗಲ್ಸುವಾ ಪ್ರದೇಶದ ನಿವಾಸಿ ತನ್ನ ಹೆಂಡತಿಯನ್ನು ಹೆರಿಗೆಗಾಗಿ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದರು. ತುಂಬು ಗರ್ಭಿಣಿಯಾಗಿದ್ದ ಕಾರಣ ಆಸ್ಪತ್ರೆಯ ವಾರ್ಡ್‌ನೊಳಗೆ ಕರೆದುಕೊಂಡು ಹೋಗಲು ಸ್ಟ್ರೆಚರ್​ ಕೇಳಿದ್ದಾರೆ. ಆದರೆ, ಆಸ್ಪತ್ರೆಯ ಸಿಬ್ಬಂದಿ ಸ್ಟ್ರೆಚರ್ ಒದಗಿಸಿಲ್ಲ. ಆದ್ದರಿಂದ ತನ್ನ ಹೆಂಡತಿಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

ಇದರ ದೃಶ್ಯಗಳು ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಆರೋಗ್ಯಾಧಿಕಾರಿ ಸುಷ್ಪೇಂದ್ರ ಕುಮಾರ್, ಈ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಜರುಗಲಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಕಚೇರಿಯ ದಾಖಲೆ ಪುಸ್ತಕ, ಪೀಠೋಪಕರಣ ಮಾರಿ ಮದ್ಯ ಕುಡಿದ ಪ್ಯೂನ್​!

For All Latest Updates

ABOUT THE AUTHOR

...view details