ಗ್ವಾಲಿಯಾರ್(ಮಧ್ಯಪ್ರದೇಶ):ಗೆಳೆಯ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಕೊಟ್ಟಿದ್ದ ಸಾಲ ಮರಳಿ ನೀಡುವಂತೆ ಕೇಳಿದ್ದರಿಂದ ಆಕ್ರೋಶಗೊಂಡು ಸ್ನೇಹಿತನ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಪಡವಾ ಪೊಲೀಸ್ ಠಾಣಾ ಕ್ಷೇತ್ರದಲ್ಲಿ ನಡೆದಿದೆ.
ಸ್ನೇಹಿತನ ಗಂಟಲು ಕತ್ತರಿಸಿ, ಕೊಲೆ ಮಾಡಿರುವ ವ್ಯಕ್ತಿ ಎರಡು ದಿನಗಳ ಕಾಲ ಮೃತದೇಹವನ್ನು ತನ್ನೊಂದಿಗೆ ಇಟ್ಟುಕೊಂಡಿದ್ದಾನೆ. ಮೃತ ವ್ಯಕ್ತಿಯ ಕುಟುಂಬಸ್ಥರು ಫೋನ್ ಮಾಡಿ ಕೇಳಿದಾಗ ಆತನ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದರ ಬೆನ್ನಲ್ಲೇ ಪೊಲೀಸ್ ಠಾಣೆಗೆ ತೆರಳಿ ತನಗೆ ದೊಡ್ಡ ಮಟ್ಟದ ಶಿಕ್ಷೆ ನೀಡುವಂತೆ ಕೇಳಿಕೊಂಡಿದ್ದಾನೆ. ವ್ಯಕ್ತಿಯನ್ನ ಬಂಧನ ಮಾಡಿರುವ ಪೊಲೀಸರು ಮೃತದೇಹವನ್ನ ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ.