ಗುಂಟೂರು(ಆಂಧ್ರಪ್ರದೇಶ): ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಇದರಿಂದ ಆತನ ಇಡೀ ಕುಟುಂಬ ಅನಾಥವಾಗಿದೆ. ಆಂಧ್ರಪ್ರದೇಶದ ಗುಂಟೂರಿನಲ್ಲಿ ಈ ಹೃದಯ ವಿದ್ರಾವಕ ಘಟನೆ ಜರುಗಿದೆ.
ರೇಪಲ್ಲೆಯ 17ನೇ ವಾರ್ಡ್ನಲ್ಲಿ ವಾಸವಾಗಿದ್ದ ನರೇಂದ್ರ ಕುಮಾರ್(28) ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. 18ನೇ ವಾರ್ಡ್ನ ಹೊರವಲಯದಲ್ಲಿ ಮನೆ ನಿರ್ಮಾಣ ಮಾಡಲು ಅಗತ್ಯ ಸಾಮಗ್ರಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆತನಿಗೆ ವಿದ್ಯುತ್ ತಂತಿ ತಗುಲಿದೆ. ತಕ್ಷಣವೇ 108 ಮೂಲಕ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಆದರೆ, ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ.