ಸಿದ್ದಿಪೇಟ್(ತೆಲಂಗಾಣ): ಏರ್ಗನ್ ಮಿಸ್ಫೈರ್ ಆಗಿ 20 ವರ್ಷದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತನನ್ನು ಮುಸಾಫ್ ಎಂದು ಗುರುತಿಸಲಾಗಿದ್ದು, ಈ ಯುವಕ ಹೈದರಾಬಾದ್ನಲ್ಲಿ ವಾಸವಾಗಿದ್ದನು.
ಮುಸಾಫ್ ಶಲಖಾಪುರದಲ್ಲಿರುವ ತನ್ನ ಸಂಬಂಧಿಗಳ ಮನೆಗೆ ಸ್ನೇಹಿತರೊಂದಿಗೆ ತೆರಳಿದ್ದಾಗ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಮಧ್ಯರಾತ್ರಿ ಆಕಸ್ಮಿಕವಾಗಿ ಗನ್ ಮಿಸ್ಫೈರ್ ಆಗಿ ಮುಸಾಫ್ ಗಾಯಗೊಂಡಿದ್ದ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ.
ಸ್ಥಳೀಯ ಆಸ್ಪತ್ರೆಯ ವೈದ್ಯರು ಹೈದರಾಬಾದ್ನಿಂದ ಸುಮಾರು ನೂರು ಕಿಲೋಮೀಟರ್ ದೂರದಲ್ಲಿರುವ ಸಿದ್ದಿಪೇಟ್ನ ಆಸ್ಪತ್ರೆಗೆ ಗಾಯಾಳುವನ್ನು ತೆಗೆದುಕೊಂಡು ಹೋಗಲು ಶಿಫಾರಸು ಮಾಡಿದ್ದಾರೆ. ಆತನನ್ನು ಆಸ್ಪತ್ರೆಗೆ ತರುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ಸಂಬಂಧಿಗಳು ಹೇಳಿದ್ದಾರೆ.
ಮಾದ್ದೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಏರ್ಗನ್ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ರಾಜ್ಯಸಭೆಯ ಮಾಜಿ MP ಬದುಕಿದ್ದಾನೆಂದು ಬಿಂಬಿಸಿ ಸುಮಾರು ಒಂದು ಕೋಟಿ ರೂಪಾಯಿ ವಂಚಿಸಲು ಯತ್ನ!