ಮಥುರಾ(ಉತ್ತರ ಪ್ರದೇಶ):ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನದಾಖಲೆಯಿಲ್ಲದೇ ಸಾಗಾಟ ಮಾಡುತ್ತಿದ್ದ 39 ಲಕ್ಷ ರೂ. ನಗದನ್ನು ಮಂಗಳವಾರ ಇಲ್ಲಿ ವಶಪಡಿಸಿಕೊಂಡಿರುವ ಪೊಲೀಸರು, ಈ ಸಂಬಂಧ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ
ಆಗ್ರಾದ ಮೀರಾ ಎನ್ಕ್ಲೇವ್ನ ನಿವಾಸಿ ಅನಿಲ್ ಕುಮಾರ್ ಬಂಧಿತ. ಸುಳಿವಿನ ಮೇರೆಗೆ ಖಾಸಗಿ ಬಸ್ನಲ್ಲಿ ದೆಹಲಿಗೆ ಪ್ರಯಾಣಿಸುತ್ತಿದ್ದ ಅನಿಲ್ ಕುಮಾರ್ನಿಂದ 39,19,900 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಮಾರ್ತಾಂಡ್ ಪ್ರಕಾಶ್ ಸಿಂಗ್ ತಿಳಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಆಗ್ರಾದಲ್ಲಿ ವಸ್ತುಗಳನ್ನು ಖರೀದಿಸಲು ಹಣವನ್ನು ದೆಹಲಿಗೆ ಕೊಂಡೊಯ್ಯುತ್ತಿದ್ದೆ ಎಂದು ಅನಿಲ್ ಕುಮಾರ್ ಹೇಳಿದ್ದಾರೆ. ಆದರೆ, ದಾಖಲೆಯಿಲ್ಲದ ಕಾರಣ ಅವರನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಣ ದುರ್ಬಳಕೆಯಾಗದಂತೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಸೋಮವಾರ ನಡೆದ ಮತ್ತೊಂದು ದಾಳಿಯಲ್ಲಿ ಛಾಟಾ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಡಿ ಮೆಡಿಕಲ್ ಕಾಲೇಜು ಬಳಿ ವ್ಯಕ್ತಿಯೊಬ್ಬನಿಂದ 3,50,000 ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವ್ಯಕ್ತಿಯನ್ನು ಹರಿಯಾಣದ ಫರಿದಾಬಾದ್ನ ನಿವಾಸಿ ಶಾಹಿದ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಒಂದೇ ದಿನದ ಅಂತರದಲ್ಲಿ ಬಾಲಕಿ-ಯುವಕ ಆತ್ಮಹತ್ಯೆ: ಚಾಮರಾಜನಗರದ ಪ್ರೇಮಿಗಳ ಸಾವಿಗೆ ಕಾರಣ ನಿಗೂಢ!