ಅಹಮದಾಬಾದ್(ಗುಜರಾತ್):ವ್ಯಕ್ತಿಯೊಬ್ಬ ಅಹಮದಾಬಾದ್ನ ಸರ್ಕಾರಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದಾರೆ.
ಆಸ್ಪತ್ರೆಯ 4 ನೇ ಮಹಡಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಯತ್ನ ಇಂದು ಬೆಳಗ್ಗೆ 35 ವರ್ಷದ ನರೇಶ್ ಸೋಲಂಕಿ ಎಂಬಾತ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಘಟನೆಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ ಕಾಣುವಂತೆ, ಯುವಕ ನಾಲ್ಕನೇ ಮಹಡಿ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಜಿಗಿಯದಂತೆ ಸ್ಥಳೀಯರು ಮನವೊಲಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಗ್ನಿಶಾಮಕ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ವ್ಯಕ್ತಿಯನ್ನು ಕೆಳಗೆ ಜಿಗಿಯದಂತೆ ಕೇಳಿಕೊಂಡಿದ್ದಾರೆ.
ಇದನ್ನೂ ಓದಿ: ಐಟಿ ಪ್ರಾಜೆಕ್ಟ್ ಕೊಡಿಸುವುದಾಗಿ ದೋಖಾ: ಅಕ್ಕ - ತಮ್ಮನ ಮೋಸದ ಜಾಲಕ್ಕೆ ಬಿದ್ದ ನವೋದ್ಯಮಿಗಳು
ಆದರೆ, ಯಾರ ಮಾತಿಗೂ ಕಿವಿಗೊಡದ ವ್ಯಕ್ತಿ ಕೆಳಗೆ ಹಾರಿದ್ದಾನೆ. ಕೆಳಗೆ ಬಿದ್ದಾತನನ್ನು ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.