ಹೈದರಾಬಾದ್: ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್ನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ತಯಾರಿಸಿದ ಕಿಕ್ - ಸ್ಟಾರ್ಟಿಂಗ್ ಜೀಪ್‌ನ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಜೀಪ್‌ಗೆ ಒದ್ದು ಕಿಕ್ ಸ್ಟಾರ್ಟ್ ಮಾಡುತ್ತಿದ್ದಾರೆ. ವಿಡಿಯೋ ನೋಡಿದ ನಂತರ ಆನಂದ್ ಮಹೀಂದ್ರಾ ಈ ವ್ಯಕ್ತಿಯ ಅಭಿಮಾನಿಯಾಗಿದ್ದಾರೆ.
ಈ ವಿಶಿಷ್ಟ ಜೀಪ್ನ್ನು ಮಹಾರಾಷ್ಟ್ರ ಮೂಲದ ದತ್ತಾತ್ರೇಯ ಲೋಹರ್ ಎಂಬ ವ್ಯಕ್ತಿ ನಿರ್ಮಿಸಿದ್ದು, ಇದಕ್ಕೆ 60 ಸಾವಿರ ರೂ. ತಗುಲಿದೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಳಸುವ ಕಿಕ್ ಸ್ಟಾರ್ಟ್ ಮಾದರಿಯನ್ನು ಇದರಲ್ಲಿ ಬಳಸಲಾಗಿದೆ.
ಈ ಕುರಿತು ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಬರೆದುಕೊಂಡಿರುವ ಅವರು, 'ನಿಸ್ಸಂಶಯವಾಗಿ ಇದು ಯಾವುದೇ ನಿಯಮಗಳಿಗೆ ಹೊಂದಿಕೆಯಾಗುವುದಿಲ್ಲ. ಆದರೆ, ನಮ್ಮ ಜನರ ಜಾಣ್ಮೆ ಮತ್ತು ಕನಿಷ್ಠ ಸಂಪನ್ಮೂಲಗಳನ್ನು ನಾನು ಪ್ರಶಂಸಿಸುತ್ತೇನೆ. ಹೆಚ್ಚು ಹೆಚ್ಚು ಸಾಮರ್ಥ್ಯಗಳನ್ನು ಪ್ರೋತ್ಸಾಹಿಸುವುದನ್ನು ಮುಂದುವರಿಸುತ್ತೇನೆ' ಎಂದು ಬರೆದುಕೊಂಡಿದ್ದಾರೆ. ಆನಂದ್ ಮಹೀಂದ್ರಾ ಅವರು ಟ್ವೀಟ್ ಮಾಡಿರುವ ಈ ವಿಡಿಯೋವನ್ನು ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.