ಹೋಶಿಯಾಪುರ್(ಪಂಜಾಬ್) :18 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಕಾಮಕನೋರ್ವ ಅಶ್ಲೀಲ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ಪಂಜಾಬ್ನ ಹೋಶಿಯಾಪುರ್ನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಆರೋಪಿಯ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಕೆಲ ತಿಂಗಳಲ್ಲಿ ಪಂಜಾಬ್ನ ಹೋಶಿಯಾಪುರ್ನ ಹಳ್ಳಿವೊಂದರಲ್ಲಿ ಈ ಘಟನೆ ನಡೆದಿದೆ. 22 ವರ್ಷದ ಆರೋಪಿಯನ್ನ ಬಂಧನ ಮಾಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಯುವತಿಗೆ ಪರಿಚಿತನಾಗಿದ್ದ ಯುವಕ ಚಬ್ಬೇವಾಲ್ ಪೊಲೀಸ್ ಠಾಣಾ ಪ್ರದೇಶದಲ್ಲಿ ವಾಸವಾಗಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಯುವತಿ ಮೇಲೆ ಅತ್ಯಾಚಾರವೆಸಗಿ, ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡಿ ಅದನ್ನ ವೈರಲ್ ಮಾಡಿದ್ದನೆಂದು ಸಬ್ ಇನ್ಸ್ಪೆಕ್ಟರ್ ಹರಪ್ರೇಮ್ ಸಿಂಗ್ ತಿಳಿಸಿದ್ದಾರೆ.
ಇದನ್ನೂ ಓದಿರಿ:ಸೇನಾ ಕಂಟೋನ್ಮೆಂಟ್ನಲ್ಲೇ ಆತ್ಮಹತ್ಯೆಗೆ ಶರಣಾದ ಯೋಧ.. ಕಾರಣ ನಿಗೂಢ!
ಬಂಧಿತ ಆರೋಪಿಯನ್ನ ವಿಶಾಲ್ ಚೌಧರಿ ಎಂದು ಗುರುತಿಸಲಾಗಿದೆ. ಯಾವುದೋ ನೆಪ ಹೇಳಿ ಯುವತಿಯನ್ನ ಮನೆಗೆ ಕರೆಯಿಸಿಕೊಂಡಿರುವ ವ್ಯಕ್ತಿ, ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ಹಾಕಿ ಪ್ರಜ್ಞೆ ತಪ್ಪಿಸಿದ್ದಾನೆ. ಇದರ ಬೆನ್ನಲ್ಲೇ ಆಕೆಯ ಮೇಲೆ ದುಷ್ಕೃತ್ಯವೆಸಗಿದ್ದು, ಅದರ ವಿಡಿಯೋ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾನೆ.
ಇದಾದ ಬಳಿಕ ಮೇಲಿಂದ ಮೇಲೆ ಬ್ಲ್ಯಾಕ್ಮೇಲ್ ಮಾಡಿರುವ ವಿಶಾಲ್, ವಿಡಿಯೋ ವೈರಲ್ ಮಾಡುವ ಬೆದರಿಕೆ ಸಹ ಹಾಕಿದ್ದಾನೆ. ಯುವಕನ ಬೇಡಿಕೆಗಳನ್ನ ಪೂರೈಕೆ ಮಾಡಲು ಯುವತಿ ಹಿಂದೇಟು ಹಾಕುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದಾನೆ. ಇದರ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಆರೋಪಿ ಬಂಧನ ಮಾಡಿದ್ದಾರೆ. ಇದೀಗ ಆತನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿ ದೂರು ದಾಖಲು ಮಾಡಿಕೊಂಡಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ