ಲಖನೌ(ಉತ್ತರ ಪ್ರದೇಶ): ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣ ಈಗಾಗಲೇ ಬೇರೆ ಬೇರೆ ರಾಜ್ಯಗಳಿಗೂ ಹಬ್ಬಿದ್ದು, ಇದೇ ವಿಚಾರವಾಗಿ ವಾದ-ವಿವಾದ ನಡೆಯುತ್ತಿದೆ. ಇದರ ಮಧ್ಯೆ ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆಯ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.
ಬುರ್ಖಾ ಧರಿಸಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಬೆನ್ನಿಗೆ ಸಮಾಜವಾದಿ ಪಕ್ಷದ ಪೋಸ್ಟರ್ ಅಂಟಿಸಲಾಗಿದೆ. ಇದರ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕೇಂದ್ರ ಸಚಿವ ಅನುರಾಗ್ ಠಾಕೂರ್ ಕೂಡ ತಮ್ಮ ಟ್ವೀಟರ್ ಅಕೌಂಟ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.