ಕರ್ನಾಟಕ

karnataka

ETV Bharat / bharat

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ ವ್ಯಕ್ತಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ - ಕಠಿಣ ಜೈಲು ಶಿಕ್ಷೆ

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ ವ್ಯಕ್ತಿಗೆ ಕಂಧಮಾಲ್ ಜಿಲ್ಲೆಯ ಫುಲ್ಬಾನಿಯ ಪೋಕ್ಸೊ ನ್ಯಾಯಾಲಯವು 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

man sentenced jail
ಪೋಕ್ಸೊ ನ್ಯಾಯಾಲಯ

By

Published : Dec 23, 2022, 1:17 PM IST

ಕಂಧಮಾಲ್ (ಒಡಿಶಾ): 2020 ರಲ್ಲಿ 5 ವರ್ಷದ ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ ವ್ಯಕ್ತಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕಂಧಮಾಲ್ ಜಿಲ್ಲೆಯ ಫುಲ್ಬಾನಿಯ ಪೋಕ್ಸೊ ನ್ಯಾಯಾಲಯವು ಆದೇಶ ಹೊರಡಿಸಿದೆ. ವಿಶೇಷ ಹಾಗೂ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಂಜಿತ್ ಕುಮಾರ್ ಬೆಹೆರಾ ಅವರು ಆರೋಪಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸುವ ಜೊತೆಗೆ 22,000 ರೂ. ದಂಡ ಹಾಕಿದ್ದಾರೆ.

ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಮತ್ತೆ 18 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಜೊತೆಗೆ, ಸಂತ್ರಸ್ತೆಗೆ 6 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

ಬೆಹೆರಾದಲೈ ಎಂಬಾತ ಜನವರಿ 26, 2020 ರಂದು ತನ್ನ ಮನೆಯ ಸಮೀಪದ ಬೀದಿಯಲ್ಲಿ ಆಟವಾಡುತ್ತಿದ್ದಾಗ ಅಪ್ರಾಪ್ತೆಯನ್ನು ಪೊದೆಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳು ಅಪ್ರಾಪ್ತೆಯ ಕಿರುಚಾಟವನ್ನು ಕೇಳಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಗ್ರಾಮಸ್ಥರು ಆಗಮಿಸುವ ಮುನ್ನವೇ ಆರೋಪಿ ಪರಾರಿಯಾಗಿದ್ದ. ನಂತರ ಸಂತ್ರಸ್ತೆಯ ತಾಯಿ ಅದೇ ದಿನ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಇದನ್ನೂ ಓದಿ:ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಭಾವಿ ಪತಿಯ ಕಿರಿ ಸಹೋದರ: 10 ಕೆಜಿ ಉಪ್ಪು ಸುರಿದು ಶವ ಹೂತಿದ್ದ ಖದೀಮ ಸೆರೆ

ABOUT THE AUTHOR

...view details