ತಿರುವನಂತಪುರಂ (ಕೇರಳ): ಆಸ್ತಿ ವಿವಾದದ ಹಿನ್ನೆಲೆ ವ್ಯಕ್ತಿಯೊಬ್ಬ ಸ್ವತಃ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.
ಆಸ್ತಿ ವಿವಾದ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ - ತಿರುವನಂತಪುರಂ ಜಿಲ್ಲೆಯ ವೆನ್ಪಾಕಲ್
ಆಸ್ತಿ ವಿವಾದದ ಹಿನ್ನೆಲೆ ತಿರುವನಂತಪುರಂ ಜಿಲ್ಲೆಯ ವೆನ್ಪಾಕಲ್ ಮೂಲದ ವ್ಯಕ್ತಿಯೋರ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ತಿರುವನಂತಪುರಂ ಜಿಲ್ಲೆಯ ವೆನ್ಪಾಕಲ್ ಮೂಲದ ರಾಜನ್ ಎಂಬುವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆ ಹಿನ್ನೆಲೆ ರಾಜನ್ಗೆ ಗಂಭೀರ ಗಾಯಗಳಾಗಿವೆ. ಜೊತೆಗೆ ಪತಿಯನ್ನು ತಡೆಯಲು ಪ್ರಯತ್ನಿಸಿದ ಅವನ ಹೆಂಡತಿಗೆ ಸಹ ಗಾಯಗಳಾಗಿದ್ದು, ದಂಪತಿಯನ್ನು ತಿರುವನಂತಪುರಂನ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ರಾಜನ್ ನೆರೆಹೊರೆಯವರೊಂದಿಗೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದಾನೆ. ಇತ್ತೀಚೆಗೆ ವಿವಾದಿತ ಸ್ಥಳದಲ್ಲಿ ರಾಜನ್ ನಿರ್ಮಿಸಿದ್ದ ತಾತ್ಕಾಲಿಕ ಶೆಡ್ ಅನ್ನು ತೆರವುಗೊಳಿಸಲು ನ್ಯಾಯಾಲಯ ಆದೇಶಿಸಿತ್ತು. ನ್ಯಾಯಾಲಯದ ಆದೇಶದಂತೆ ಅಧಿಕಾರಿಗಳು ಶೆಡ್ ತೆರವುಗೊಳಿಸಲು ಸ್ಥಳಕ್ಕಾಗಮಿಸಿದಾಗ ರಾಜನ್ ಸ್ವತಃ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.