ಕರ್ನಾಟಕ

karnataka

ETV Bharat / bharat

ರಾಷ್ಟ್ರ ರಾಜಧಾನಿಯಲ್ಲಿ ಗುಂಡಿನ ಸದ್ದು: ಯುವಕ ಸಾವು! - ದೆಹಲಿಯಲ್ಲಿ ಗುಂಡಿನ ದಾಳಿ ಯುವಕ ಸಾವು

ಪೂರ್ವ ದೆಹಲಿಯಲ್ಲಿ ಯುವಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದು, ಘಟನೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ.

man shot dead by unidentified men  in Delhi
ಸಾಂದರ್ಭಿಕ ಚಿತ್ರ

By

Published : Feb 4, 2022, 7:04 AM IST

ನವದೆಹಲಿ: ಪೂರ್ವ ದೆಹಲಿಯ ಲಕ್ಷ್ಮಿ ನಗರ ಪ್ರದೇಶದಲ್ಲಿ ಯುವಕನೊಬ್ಬನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಗುರು ರಾಮದಾಸ್ ನಗರದ ನಿವಾಸಿ ಮಯೂರ್ ಚೌಹಾಣ್(24) ಮೃತ ಯುವಕ. ನಗರದ ಗುರುದ್ವಾರದ ಬಳಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದು, ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಯೊಬ್ಬ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಚೌಹಾಣ್ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಉಪ ಆಯುಕ್ತ (ಪೂರ್ವ) ಪ್ರಿಯಾಂಕಾ ಕಶ್ಯಪ್ ಹೇಳಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಗಣೇಶ್ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ 10 ರಿಂದ 15 ಜನರು ಗುಂಡು ಹಾರಿಸಿ ವಾಹನಗಳನ್ನು ಹಾನಿಗೊಳಿಸುತ್ತಿದ್ದಾರೆ ಎಂದು ಸ್ಥಳೀಯರು ಶಕರ್‌ಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಬುಧವಾರ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಎರಡು ಕಾರುಗಳು ಮತ್ತು ಒಂದು ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಶಕರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಕಶ್ಯಪ್ ತಿಳಿಸಿದ್ದಾರೆ.

ಇದನ್ನೂ ಓದಿ:ಜಮ್ಮುವಿನಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ದುರ್ಮರಣ

ABOUT THE AUTHOR

...view details