ಹೈದರಾಬಾದ್:ಜನನಿಬಿಡ ರಸ್ತೆಯಲ್ಲೇ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಹೈದರಾಬಾದ್ನಲ್ಲಿ ನಡೆದಿದೆ. ತನ್ನ ಪ್ರೀತಿ ಒಪ್ಪಿಕೊಳ್ಳಲಿಲ್ಲ ಎಂಬ ಕಾರಣಕ್ಕಾಗಿ ಚಾಕುವಿನಿಂದ ಪಾಗಲ್ ಪ್ರೇಮಿ ಹತ್ತಾರು ಸಲ ಇರಿದಿದ್ದಾನೆ. ಸ್ಥಳೀಯ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಾವಳಿ ಸೆರೆಯಾಗಿವೆ.
ಹೈದರಾಬಾದ್ನ ಹಫೀಜ್ ಬಾಬಾ ನಗರದಲ್ಲಿ ಈ ಘಟನೆ ನಡೆದಿದ್ದು, 40 ವರ್ಷದ ಮಹಿಳೆ ಸೈಯದ್ ನೂರ್ ಬಾನು ಮೇಲೆ ಪಕ್ಕದ ಮನೆಯಲ್ಲೇ ವಾಸವಾಗಿದ್ದ ಶೇಖ್ ನಸೀರುದ್ದೀನ್ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಇದರ ದೃಶ್ಯಾವಳಿ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿವೆ. ಸೈದನೂರು ಬಾನುಗೆ ಈಗಾಗಲೇ ಮೂವರು ಮಕ್ಕಳಿದ್ದು, ಕಳೆದ ಮೂರು ವರ್ಷಗಳ ಹಿಂದೆ ಪತಿ ಮೃತಪಟ್ಟಿದ್ದಾನೆ. ಅಂದಿನಿಂದ ಅಂಗಡಿವೊಂದರಲ್ಲಿ ಕೆಲಸ ಮಾಡಿ, ಮಕ್ಕಳನ್ನ ಸಾಕುತ್ತಿದ್ದಾಳೆ.
ನಡುರಸ್ತೆಯಲ್ಲೇ ಮಹಿಳೆಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ ಇದನ್ನೂ ಓದಿ:ರಾಜ್ಯದಲ್ಲಿ ಮುಸಲ್ಮಾನರ ಅಟ್ಟಹಾಸ ಹೆಚ್ಚಾಗಿದೆ: ದಲಿತ ಯುವಕನ ಹತ್ಯೆಗೆ ಸಿದ್ಧಲಿಂಗ ಸ್ವಾಮೀಜಿ ಕಿಡಿ
ಲಭ್ಯವಾಗಿರುವ ಮಾಹಿತಿ ಪ್ರಕಾರ ವಿವಾಹೇತರ ಸಂಬಂಧಕ್ಕಾಗಿ, ತನ್ನನ್ನ ಪ್ರೀತಿಸಲು ನಾಸಿರುದ್ದೀನ್ ಕಳೆದ ಕೆಲ ದಿನಗಳಿಂದ ಆಕೆಯ ಮೇಲೆ ಒತ್ತಡ ಹಾಕುತ್ತಿದ್ದನಂತೆ. ಇದನ್ನ ಮಹಿಳೆ ತಿರಸ್ಕರಿಸಿದ್ದಳು. ಹೀಗಾಗಿ, ಕೋಪಗೊಂಡು ಈ ದುಷ್ಕೃತ್ಯವೆಸಗಿದ್ದಾನೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ದಾಳಿಯಿಂದಾಗಿ ಮಹಿಳೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.ಘಟನೆ ತಡೆಯಲು ಇತರರೂ ಯತ್ನಿಸಿದಾಗ, ಅವರಿಗೆ ಚಾಕುವಿನಿಂದ ಬೆದರಿಸಿದ್ದು, ಅಲ್ಲಿಂದ ಪರಾರಿಯಾಗಿದ್ದಾನೆ.
ಗಾಯಗೊಂಡಿದ್ದ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗೋಸ್ಕರ ಶೋಧಕಾರ್ಯ ನಡೆಸುತ್ತಿದ್ದಾರೆ.