ಕಾನ್ಪುರ(ಉತ್ತರ ಪ್ರದೇಶ):ಬಾಲಕಿಗೆ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿದ್ದಕ್ಕಾಗಿ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಘಟನೆ ನಡೆದಿದೆ. ಕಳೆದ ಮಂಗಳವಾರ ಸಂಜೆ ಈ ಪ್ರಕರಣ ನಡೆದಿದೆ.
ಕಾನ್ಪುರದ ಕಚಿ ಬಸ್ತಿಯಲ್ಲಿ ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಬಾಲಕಿಗೆ ಕೆಲವರು ಕಿರುಕುಳ ನೀಡುತ್ತಿದ್ದರು. ಇದಕ್ಕೆ ನೈರ್ಮಲ್ಯ ಕಾರ್ಯಕರ್ತ ಸಂಜಯ್ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಆತನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮೃತರನ್ನು ಕಾನ್ಪುರ್ ಮುನ್ಸಿಪಲ್ ಕಾರ್ಪೊರೇಷನ್ ನೈರ್ಮಲ್ಯ ಕಾರ್ಮಿಕ ಸಂಜಯ್ ವಾಲ್ಮೀಕಿ(35) ಎಂದು ಗುರುತಿಸಲಾಗಿದೆ. ಸಂಜಯ್ ಅವರ ಸಹೋದರ ಕಮಲ್ ನೀಡಿರುವ ಮಾಹಿತಿ ಪ್ರಕಾರ, ಅದೇ ಕಾಲೋನಿಯಲ್ಲಿ ವಾಸಿಸುವ ವಿಶಾಲ್ ಎಂಬಾತ ನೆರೆಹೊರೆಯಲ್ಲಿ ವಾಸವಾಗಿದ್ದ ಹುಡುಗಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ.