ನವದೆಹಲಿ :ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ಬಯೋಲಾಜಿಕಲ್ ಇ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕಿ ಮಹಿಮಾ ದಾಟ್ಲಾ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಇಂದು ನಾನು ಬಯೋಲಾಜಿಕಲ್ ಇ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕಿ ಮಹಿಮಾ ದಾಡ್ಲಾ ಅವರನ್ನು ಭೇಟಿ ಮಾಡಿದೆ. ಬಯೋಲಾಜಿಕಲ್ ಇ ಹೊಸ ಕಾರ್ಬೆವಾಕ್ಸ್ ಲಸಿಕೆಯನ್ನು ಉತ್ಪಾದನೆ ಮಾಡುತ್ತಿದೆ. ಈ ಕುರಿತಂತೆ ಸಮಗ್ರವಾಗಿ ಮಾಹಿತಿ ನೀಡಿದರು. ಲಸಿಕೆ ಉತ್ಪಾದನೆಗಾಗಿ ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಹೈದರಾಬಾದ್ ಮೂಲದ ಬಯೋಲಾಜಿಕಲ್ ಇ ಜಾನ್ಸನ್ ಮತ್ತು ಜಾನ್ಸನ್ ಕೋವಿಡ್-19 ಲಸಿಕೆ ಉತ್ಪಾದಿಸುತ್ತಿದೆ. ದೇಶದಲ್ಲಿ ಒಟ್ಟಾರೆ ಪೂರೈಕೆಯನ್ನು ಹೆಚ್ಚಿಸಲು ಕಂಪನಿ ಒಂದು ತಿಂಗಳಲ್ಲಿ 75 ರಿಂದ 80 ದಶಲಕ್ಷ ಪ್ರಮಾಣದ ಲಸಿಕೆ ಉತ್ಪಾದಿಸುವ ಯೋಜನೆ ಹೊಂದಿದೆ. ಲಸಿಕೆಯನ್ನು ಹೂಸ್ಟನ್‌ನ ಬೇಲರ್ ಕಾಲೇಜ್ ಆಫ್ ಮೆಡಿಸಿನ್ ಮತ್ತು ಡೈನವಾಕ್ಸ್ ಟೆಕ್ನಾಲಜೀಸ್ ಕಾರ್ಪ್‌ನೊಂದಿಗೆ ಅಭಿವೃದ್ಧಿಪಡಿಸಲಾಗುತ್ತಿದೆ.