ಇಂಫಾಲ್ :ಮಣಿಪುರ ರಾಜ್ಯದಲ್ಲೂ ಪಕ್ಷಾಂತರ ಪರ್ವ ಆರಂಭವಾಗಿದೆ. ಪಕ್ಷಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಮಣಿಪುರ ಕಾಂಗ್ರೆಸ್ ಮುಖ್ಯಸ್ಥ ಗೋವಿಂದದಾಸ್ ಕೊಂತೌಜಮ್ ಸಿಎಂ ಎನ್. ಬಿರೆನ್ ಸಿಂಗ್ ಸಮ್ಮುಖದಲ್ಲಿ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಅನಿಲ್ ಬಾಲುನಿ, ಪ್ರಮುಖ ವ್ಯಕ್ತಿಯೋರ್ವರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದರು. ಆಗಸ್ಟ್ ಒಂದು ಭಾನುವಾರ ( ಇಂದು ) ಮಧ್ಯಾಹ್ನ ನವದೆಹಲಿಯ 6ಎ ಡಿಡಿಯು ಮಾರ್ಗದ ಬಿಜೆಪಿ ಮುಖ್ಯ ಕಾರ್ಯಾಲಯದಲ್ಲಿ ಪ್ರಮುಖ ವ್ಯಕ್ತಿಯೊಬ್ಬರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಅವರು ಹೇಳಿದ್ದರು.