ಕರ್ನಾಟಕ

karnataka

ETV Bharat / bharat

ಮಣಿಪುರದಲ್ಲಿ ಇಂದು 2ನೇ ಹಂತದ ಮತದಾನ ಆರಂಭ; 22 ಕ್ಷೇತ್ರಗಳಲ್ಲಿ 92 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ - ಮಣಿಪುರದಲ್ಲಿ ಇಂದು 2ನೇ ಹಂತದ ಮತದಾನ ಆರಂಭ

ಮಣಿಪುರದಲ್ಲಿಂದು 2ನೇ ಹಾಗೂ ಕೊನೆಯ ಹಂತದ ಮತದಾನ ಆರಂಭವಾಗಿದೆ. 6 ಜಿಲ್ಲೆಗಳ 22 ಕ್ಷೇತ್ರಗಳಲ್ಲಿ 92 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Manipur Second Phase of Voting Today; 92 Candidates in Fray for 22 Seats
ಮಣಿಪುರದಲ್ಲಿ ಇಂದು 2ನೇ ಹಂತದ ಮತದಾನ ಆರಂಭ; 22 ಕ್ಷೇತ್ರಗಳಲ್ಲಿ 92 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

By

Published : Mar 5, 2022, 7:12 AM IST

ಇಂಪಾಲ್‌: ಮಣಿಪುರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದ್ದು, 6 ಜಿಲ್ಲೆಗಳ 22 ಕ್ಷೇತ್ರಗಳಲ್ಲಿ 92 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದು ನಿರ್ಧರಿಸಲಾಗುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 4ರವರೆಗೆ ನಡೆಯಲಿದೆ.

1,247 ಮತಗಟ್ಟೆಗಳಲ್ಲಿ ಮತದಾನ ನಡೆಸಲು ಎಲ್ಲ ವ್ಯವಸ್ಥೆ ಮಾಡಲಾಗಿದೆ. ತೌಬಲ್, ಚಾಂಡೆಲ್, ಉಖ್ರುಲ್, ಸೇನಾಪತಿ, ತಮೆಂಗ್ಲಾಂಗ್ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ಒಟ್ಟು 8.38 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ರಾಜೇಶ್ ಅಗರ್ವಾಲ್ ತಿಳಿಸಿದ್ದಾರೆ.

ಬಿಜೆಪಿ 2ನೇ ಹಂತದಲ್ಲಿ ನಡೆಯುತ್ತಿರುವ ಎಲ್ಲ ಕ್ಷೇತ್ರಗಳಿಗೂ(22) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ (18), ನ್ಯಾಷನಲ್ ಪೀಪಲ್ಸ್ ಪಾರ್ಟಿ (11), ಜನತಾ ದಳ (ಯುನೈಟೆಡ್) ಹಾಗೂ ನಾಗಾ ಪೀಪಲ್ಸ್ ಫ್ರಂಟ್ ತಲಾ 10. ಶಿವಸೇನೆ, ಎನ್‌ಸಿಪಿ, ಸಿಪಿಐ ಮತ್ತು ಇತರ ಹಲವು ಪಕ್ಷಗಳ ಒಟ್ಟು 12 ಸ್ವತಂತ್ರರು ಸ್ಪರ್ಧಿಸಿದ್ದಾರೆ.

92 ಅಭ್ಯರ್ಥಿಗಳ ಪೈಕಿ 17 ಮಂದಿ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂದು ಅಗರ್ವಾಲ್ ಹೇಳಿದ್ದಾರೆ. 223 ಮತಗಟ್ಟೆಗಳನ್ನು ಸಂಪೂರ್ಣವಾಗಿ ಮಹಿಳಾ ಮತಗಟ್ಟೆ ಸಿಬ್ಬಂದಿಯಿಂದಲೇ ನಿರ್ವಹಿಸಲಾಗುವುದು ಎಂದು ತಿಳಿಸಿದ್ದು, ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಅಥವಾ ವಿಡಿಯೋಗ್ರಫಿಗೆ ವ್ಯವಸ್ಥೆ ಮಾಡಲಾಗಿದೆ. ಮತದಾನದ ಭದ್ರತೆಗೆ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ಫೆಬ್ರವರಿ 28 ರಂದು ನಡೆದಿದ್ದು, ಕೆಲವೆಡೆ ಹಿಂಸಾಚಾರಕ್ಕೆ ಕಾರಣವಾಗಿತ್ತು. ಹೀಗಾಗಿ 2ನೇ ಹಂತದಲ್ಲಿ ಭಾರಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದನ್ನೂ ಓದಿ:ಮಣಿಪುರ ವಿಧಾನಸಭೆ ಫೈಟ್​: ಶೇ. 78ರಷ್ಟು ಮತದಾನ; 173 ಅಭ್ಯರ್ಥಿಗಳ ಭವಿಷ್ಯ ಭದ್ರ

ABOUT THE AUTHOR

...view details