ಕರ್ನಾಟಕ

karnataka

ETV Bharat / bharat

ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿಗೆ: ಹೆಚ್ಚಿದ ಆಕ್ರೋಶದ ಜ್ವಾಲೆ.. ಬೃಹತ್ ಪ್ರತಿಭಟನೆ

ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

manipur-women-paraded-video-massive-protest-in-churachandpur-32-year-old-culprit-arrested
ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿಗೆ: ಹೆಚ್ಚಿದ ಆಕ್ರೋಶದ ಜ್ವಾಲೆ... ಬೃಹತ್ ಪ್ರತಿಭಟನೆ

By

Published : Jul 20, 2023, 9:18 PM IST

ನವದೆಹಲಿ: ಈಶಾನ್ಯ ರಾಜ್ಯ ಮಣಿಪುರ ಕಳೆದ ಎರಡು ತಿಂಗಳಿಂದ ಹಿಂಸಾಚಾರ ಪೀಡಿತವಾಗಿದೆ. ಇದರ ನಡುವೆ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ವರದಿಯಾಗಿದೆ. ಇದು ರಾಜ್ಯದಲ್ಲಿ ಮತ್ತಷ್ಟು ಆಕ್ರೋಶದ ಜ್ವಾಲೆಯನ್ನು ಎಬ್ಬಿಸಿದೆ. ಜೊತೆಗೆ ಈ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ಬಗ್ಗೆ ದೇಶಾದ್ಯಂತ ವ್ಯಾಪಕ ಖಂಡನೆಗೆ ಕಾರಣವಾಗಿದೆ.

ಇದನ್ನೂ ಓದಿ:ಮಣಿಪುರ ವಿಡಿಯೋ ನೋಡಿ ಬೆಚ್ಚಿಬಿದ್ದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಅಕ್ಷಯ್​​ ಕುಮಾರ್​

ಓರ್ವ ಆರೋಪಿ ಬಂಧನ: ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ಮಧ್ಯೆ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಗುಂಪೊಂದು ಮಹಿಳೆಯರ ನಗ್ನ ಮೆರವಣಿಗೆ ಮಾಡಿ ಹಲ್ಲೆ ನಡೆಸಿರುವ ದೃಶ್ಯಗಳು ಬೆಚ್ಚಿಬೀಳಿಸುವಂತಿವೆ. ಈ ಘಟನೆಯಿಂದ ಆಕ್ರೋಶಗೊಂಡ ಜನತೆ ಚುರಾಚಂದ್‌ಪುರದಲ್ಲಿ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ, ಘೋರ ಘಟನೆ ಬಗ್ಗೆ ಮಣಿಪುರ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಹುಯಿರೆಮ್ ಹೆರೋಡಾಸ್ ಮೈತೆಯ್ (32) ಎಂದು ಗುರುತಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಮಣಿಪುರ ಮಹಿಳೆಯರ ಬೆತ್ತಲೆ ವಿಡಿಯೋ; ಓರ್ವ ಆರೋಪಿ ಬಂಧನ, ಉಳಿದವರಿಗಾಗಿ ತಲಾಷ್​: ಸಿಎಂ ಬಿರೇನ್​ ಸಿಂಗ್​

ಪ್ರಧಾನಿ, ಸಿಎಂ ಖಂಡನೆ: ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಮಹಿಳೆಯರನ್ನು ಗೌರವಿಸದ ಸಮಾಜ ತೃಣಕ್ಕೆ ಸಮ. ಇಂತಹ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಮಣಿಪುರದ ಈ ಅಮಾನವೀಯ ಕೃತ್ಯವು ನನ್ನನ್ನು ತೀವ್ರ ಘಾಸಿ ಮಾಡಿದೆ. ನಾಗರಿಕ ಸಮಾಜಕ್ಕೆ ಇದು ನಾಚಿಕೆಗೇಡಿನ ಸಂಗತಿ. ಈ ಕೃತ್ಯದಲ್ಲಿ ಭಾಗಿಯಾದ ಯಾವುದೇ ತಪ್ಪಿತಸ್ಥರನ್ನು ಬಿಡುವುದಿಲ್ಲ. ಮಹಿಳೆಯರ ಗೌರವ ಕಾಪಾಡಲು ಎಲ್ಲ ರಾಜ್ಯಗಳ ಸಿಎಂಗಳು ಕಾನೂನು ಮತ್ತು ಸುವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಹೇಳಿದ್ದಾರೆ. ಅಲ್ಲದೇ, ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, ಈ ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಮಣಿಪುರ ಮಹಿಳೆಯರ ಮೇಲಿನ ದುಷ್ಕೃತ್ಯ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ಮೋದಿ

ಸುಪ್ರೀಂನಲ್ಲಿ ಸ್ವಯಂ ವಿಚಾರಣೆ:ಮತ್ತೊಂದೆಡೆ, ಮಣಿಪುರದ ಮಾನಗೇಡಿ ಘಟನೆಯಿಂದ ನ್ಯಾಯಾಲಯವು ತೀವ್ರವಾಗಿ ವಿಚಲಿತವಾಗಿದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡು, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಬಿಂಬಿಸುವ ವೈರಲ್ ವಿಡಿಯೋಗಳPM Modiನ್ನು ತೆಗೆದುಹಾಕುವಂತೆ ಸೂಚಿಸಿದರು. ಇದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ. ಈ ಘಟನೆ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಸರ್ಕಾರ ಶೀಘ್ರ ಕ್ರಮಕೈಗೊಳ್ಳಲು ವಿಫಲವಾದಲ್ಲಿ ಮಧ್ಯಪ್ರವೇಶಿಸುವುದಾಗಿ ಸರ್ವೋಚ್ಛ ನ್ಯಾಯಾಲಯ ಎಚ್ಚರಿಸಿದೆ.

ಇದನ್ನೂ ಓದಿ:ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ತೀವ್ರ ಆಕ್ರೋಶ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ABOUT THE AUTHOR

...view details