ಮುಂಬೈ: ಉದ್ಯಮಿ ಮನ್ಸುಖ್ ಹಿರೆನ್ ಸಾವಿನ ಪ್ರಕರಣ ತನಿಖೆಯ ಭಾಗವಾಗಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಗುರುವಾರ ಸಂಜೆ ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದೆ.
ಮನ್ಸುಖ್ ಹಿರೆನ್ ಸಾವು: ಘಟನಾ ಸ್ಥಳ ಪರಿಶೀಲನೆ ನಡೆಸಿದ ಎಟಿಎಸ್ - ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ
ಹಿರೆನ್ ಸಾವಿನ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದ್ದು, ಇದೀಗ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
ಎಟಿಎಸ್ ಅಧಿಕಾರಿಯೊಬ್ಬರ ಪ್ರಕಾರ, ಮಾರ್ಚ್ 5 ರಂದು ಹಿರೆನ್ ಅವರ ದೇಹವು ನದಿಯಲ್ಲಿ ಪತ್ತೆಯಾಗಿದೆ. ಇನ್ನು ಫೆಬ್ರವರಿ 25 ರಂದು ದಕ್ಷಿಣ ಮುಂಬೈನ ಕಾರ್ಮೈಕಲ್ ರಸ್ತೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳನ್ನು ಸಾಗಿಸುವ ಕೈಬಿಟ್ಟ ವಾಹನಕ್ಕೆ ಈ ಪ್ರಕರಣ ಸಂಬಂಧಿಸಿದೆ. ಇನ್ನು ವಾಹನದ ಮಾಲೀಕ ಹಿರೆನ್ ಕಳೆದ ಶುಕ್ರವಾರ ಥಾಣೆ ಜಿಲ್ಲೆಯ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈಗ ಎಟಿಎಸ್ ಈ ಪ್ರಕರಣವನ್ನು ತನಿಖೆ ನಡೆಸುತ್ತಿದೆ.
ಈ ನಡುವೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಈ ಪ್ರಕರಣದ ತನಿಖೆಗಾಗಿ ಗೃಹ ಸಚಿವಾಲಯದಿಂದ ಆದೇಶಗಳನ್ನು ಸಹ ಪಡೆದಿದೆ.