ನವದೆಹಲಿ:ವಿಪರೀತ ವಾಯು ಮಾಲಿನ್ಯ ಸಮಸ್ಯೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪಟಾಕಿ ಸಿಡಿಸುವುದಕ್ಕೆ ನಿಷೇಧ ಹೇರಲಾಗಿದೆ. ನಿಯಮ ಮೀರಿ ಪಟಾಕಿ ಸಿಡಿಸಿದರೆ 200 ರೂ. ದಂಡ ಹಾಗೂ 6 ತಿಂಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ದೆಹಲಿ ಪರಿಸರ ಇಲಾಖೆಯ ಸಚಿವ ಗೋಪಾಲ್ ರೈ ಅವರಿಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಪಟಾಕಿಗೆ ನಿಷೇಧ: ಸಿಡಿಸಿದ್ರೆ 200 ರೂ. ದಂಡ, 6 ತಿಂಗಳು ಜೈಲು ಶಿಕ್ಷೆ
ದೆಹಲಿಯಲ್ಲಿ ಪಟಾಕಿಗಳ ತಯಾರಿಕೆ, ದಾಸ್ತಾನು ಹಾಗೂ ಮಾರಾಟ ಶಿಕ್ಷಾರ್ಹ ಅಪರಾಧ ಎಂದು ಸರ್ಕಾರ ಆದೇಶಿಸಿದೆ.
ದೀಪಾವಳಿಗೆ ಪಟಾಕಿಗೆ ನಿಷೇಧ: ಸಿಡಿದರೆ 200 ರೂ. ದಂಡ, 6 ತಿಂಗಳು ಜೈಲು ಶಿಕ್ಷೆ
ದೆಹಲಿಯಲ್ಲಿ ಪಟಾಕಿ ನಿಷೇಧಿಸಿ ಹೊರಡಿಸಿರುವ ಆದೇಶ ಜಾರಿಗಾಗಿಯೇ ಒಟ್ಟಾರೆ 408 ತಂಡಗಳನ್ನು ರಚನೆ ಮಾಡಲಾಗಿದೆ. ಪಟಾಕಿ ಖರೀದಿ ಮತ್ತು ಸಿಡಿಸುವುದು ಕಂಡುಬಂದಲ್ಲಿ ದಂಡ ಹಾಗೂ ಜೈಲು ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಅಲ್ಲದೇ, ತಯಾರಿಕೆ, ದಾಸ್ತಾನು ಹಾಗೂ ಮಾರಾಟ ಮಾಡಿದ್ರೆ 5 ಸಾವಿರ ರೂ.ವರೆಗೆ ದಂಡ ಮತ್ತು 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಸಂಪೂರ್ಣ ಸಹಕಾರದ ಭರವಸೆ ನೀಡಿದ ಶಶಿ ತರೂರ್