ಕರ್ನಾಟಕ

karnataka

ETV Bharat / bharat

ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ ; 9 ಕಾರ್ಮಿಕರ ಸಾವು, ಹಲವರು ಗಂಭೀರ

ಸಿಎಂ ಯೋಗಿ ಆದಿತ್ಯನಾಥ್ ಆದೇಶದ ಮೇರೆಗೆ ಮೀರತ್ ಐಜಿ ಪ್ರವೀಣ್ ಕುಮಾರ್ ಹಾಗೂ ಹಾಪುರ್ ಡಿಎಂ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಮಾಹಿತಿ ಪ್ರಕಾರ ಈವರೆಗೆ 9 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

MANY PEOPLE DIED AND INJURED IN BOILER EXPLOSION IN CHEMICAL FACTORY HAPUR
MANY PEOPLE DIED AND INJURED IN BOILER EXPLOSION IN CHEMICAL FACTORY HAPUR

By

Published : Jun 4, 2022, 6:23 PM IST

Updated : Jun 4, 2022, 7:14 PM IST

ಹಾಪುರ (ಉತ್ತರಪ್ರದೇಶ) :ಹಾಪುರ ಜಿಲ್ಲೆಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಾಯ್ಲರ್ ಸ್ಫೋಟದಿಂದ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರ್ಖಾನೆಯಲ್ಲಿದ್ದ 9 ಜನ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಅಗ್ನಿಶಾಮಕ ದಳದ ಅರ್ಧ ಡಜನ್ ವಾಹನಗಳು ಸ್ಥಳದಲ್ಲಿಯೇ ಬೀಡುಬಿಟ್ಟಿವೆ. ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುದ್ದಿ ತಿಳಿದು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸೇರಿದಂತೆ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಸಿಎಂ ಆದೇಶದ ಮೇರೆಗೆ ಮೀರತ್ ಐಜಿ ಪ್ರವೀಣ್ ಕುಮಾರ್, ಹಾಪುರ್ ಡಿಎಂ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಮಾಹಿತಿ ಪ್ರಕಾರ ಈವರೆಗೆ 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

Last Updated : Jun 4, 2022, 7:14 PM IST

ABOUT THE AUTHOR

...view details