ಕರ್ನಾಟಕ

karnataka

ETV Bharat / bharat

ಭೀಕರ ರಸ್ತೆ ಅಪಘಾತ: ಆಂಧ್ರದಲ್ಲಿ 7, ಛತ್ತೀಸಗಢದಲ್ಲಿ 6 ಜನರು ಸಾವು! - ಆಂಧ್ರಪ್ರದೇಶದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ

ಆಂಧ್ರ ಪ್ರದೇಶದ ವೈಎಸ್ಆರ್ ಜಿಲ್ಲೆಯ ಕೊಂಡಾಪುರಂ ಸಮೀಪ ಘಟಿಸಿದ ರಸ್ತೆ ಅವಘಡದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಅದೇ ರೀತಿ, ಛತ್ತೀಸ್‌ಗಢದಲ್ಲೂ ಭೀಕರ ಅಪಘಾತ ವರದಿಯಾಗಿದೆ.

many people died in road accident at Andhra  many people died in road accident at Chhattisgarh  many people died in road accident  ಆಂಧ್ರದ ಭೀಕರ ರಸ್ತೆ ಅಪಘಾತದಲ್ಲಿ ಏಳು ಭಕ್ತರು ಸಾವು  ಛತ್ತೀಸಗಢದಲ್ಲಿ ಆರು ಜನ ಸಾವು  ಆಂಧ್ರಪ್ರದೇಶದ ಮತ್ತೊಂದು ಭೀಕರ ರಸ್ತೆ ಅಪಘಾತ  ಭೀಕರ ರಸ್ತೆ ಅಪಘಾತದಲ್ಲಿ ಏಳು ಪ್ರಯಾಣಿಕರು ಮೃತ  ರಾಜ್ಯಗಳಲ್ಲಿ ಭೀಕರ ರಸ್ತೆ ಅಪಘಾತ  ಆಂಧ್ರಪ್ರದೇಶದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ  ಛತ್ತೀಸ್‌ಗಢ ಭೀಕರ ರಸ್ತೆ ಅಪಘಾತ
ಆಂಧ್ರದ ಭೀಕರ ರಸ್ತೆ ಅಪಘಾತದಲ್ಲಿ ಏಳು ಭಕ್ತರು ಸಾವು

By

Published : May 15, 2023, 9:33 AM IST

ಛತ್ತೀಸ್‌ಗಢ​/ಆಂಧ್ರ ಪ್ರದೇಶ:ಆಂಧ್ರ ಪ್ರದೇಶ ಮತ್ತು ಛತ್ತೀಸ್​ಗಢ ರಾಜ್ಯಗಳಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸುಮಾರು 13 ಜನರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ.

ಆಂಧ್ರ ಪ್ರದೇಶದಲ್ಲಿ ರಸ್ತೆ ಅಪಘಾತ:ಲಾರಿ ಮತ್ತು ತೂಫಾನ್​ ವಾಹನ ಮುಖಾಮುಖಿ ಡಿಕ್ಕಿಯಾಗಿ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಂಡಾಪುರಂ ತಾಲೂಕಿನ ಚಿತ್ರಾವತಿ ಸೇತುವೆ ಬಳಿ ಇಂದು ಘಟನೆ ನಡೆದಿದೆ. ಕಾಕಿನಾಡ ಜಿಲ್ಲೆಯಲ್ಲಿ ಆಟೋ ಮತ್ತು ಖಾಸಗಿ ಬಸ್​​​ ನಡುವೆ ಡಿಕ್ಕಿಯಾಗಿ ಆರು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ತಾಡಿಪತ್ರಿ ಭಾಗದ ಜನರು ತೂಫಾನ್​ ವಾಹನದಲ್ಲಿ ತಿರುಪತಿ ತಿರುಮಲ ಸ್ವಾಮಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಅಪಘಾತವಾಗಿದೆ. ತಾಡಪತ್ರಿ ಕಡೆಯಿಂದ ಬಂದ ಲಾರಿ ಅತಿವೇಗದಲ್ಲಿ ಸಂಚರಿಸುತ್ತಿದ್ದ ತೂಫಾನ್​ ವಾಹನಕ್ಕೆ ಡಿಕ್ಕಿ ಹೊಡೆಯಿತು. ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರು. ಗಂಭೀರ ಗಾಯಗೊಂಡವರನ್ನು ತಾಡಪತ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ತಾಡಿಪತ್ರಿ ಪ್ರದೇಶಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಬೆಳಗಿನ ಜಾವವಾದ್ದರಿಂದ ಅತಿವೇಗದಲ್ಲಿದ್ದ ಎರಡು ವಾಹನಗಳು ಡಿಕ್ಕಿ ಹೊಡೆದಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಊರಿು ಸಮೀಪಿಸುತ್ತಿದ್ದಂತೆ ಅಪಘಾತ ಸಂಭವಿಸಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.

ಛತ್ತೀಸ್‌ಗಢ ರಸ್ತೆ ಅಪಘಾತ:ಒಂದುಮಗು ಮತ್ತು ಮಹಿಳೆಯರು ಸೇರಿ 6 ಜನರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಲೋದಬಜಾರ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ರಸ್ತೆ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿವೆ.

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳಿಂದ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಸಂಭವಿಸಿದ ಅಪಘಾತದಲ್ಲಿ ಪಿಕಪ್​ ವಾಹನಕ್ಕೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆಯಿತು. ಭಾನುವಾರ ರಾತ್ರಿ 10:30ಕ್ಕೆ ಪಲಾರಿಯಿಂದ 6 ಕಿ.ಮೀ ದೂರದಲ್ಲಿರುವ ಗೊಂಡ ಪುಲಿಯಾ ಗ್ರಾಮದ ಬಳಿ ಅಪಘಾತ ನಡೆದಿದೆ.

12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಮೂಲಗಳು ತಿಳಿಸಿವೆ. ಸಮುದಾಯ ಆರೋಗ್ಯ ಕೇಂದ್ರ ಪಲಾರಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಬಲೋದಬಜಾರ್‌ನಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಾಹಿತಿ ತಿಳಿದ ಕೂಡಲೇ ಪಾಲಾರಿ ಪೊಲೀಸ್ ಠಾಣೆ ಹಾಗೂ ಆರೋಗ್ಯ ಕೇಂದ್ರ 108 ವಾಹನದಲ್ಲಿ ಗಾಯಾಳುಗಳನ್ನು ಪಾಲಾರಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದರು. ಚಿಕಿತ್ಸೆ ವೇಳೆ ಮಗು ಸೇರಿದಂತೆ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ರಕ್ಷಣೆ ನೀಡುವುದು ತಮ್ಮ ಮೊದಲ ಆದ್ಯತೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಹೇಳಿದರು. ತಲೆಮರೆಸಿಕೊಂಡಿರುವ ಟ್ರಕ್ ಚಾಲಕನನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ.

ಇದನ್ನೂ ಓದಿ:ಭೀಕರ ರಸ್ತೆ ಅಪಘಾತ, ಆರು ಮಂದಿ ಮಹಿಳೆಯರು ಸಾವು

ABOUT THE AUTHOR

...view details