ಬಾರಾಬಂಕಿ (ಉತ್ತರ ಪ್ರದೇಶ):ಲಾರಿ ಮತ್ತು ಬಸ್ ನಡುವೆ ಡಿಕ್ಕಿಯಾಗಿ 9 ಜನರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಅಯೋಧ್ಯೆಯ ಕಡೆ ಬರುತ್ತಿದ್ದ ಬಸ್ ಮುಂಬದಿಯಿಂದ ಬರುತ್ತಿದ್ದ ಲಾರಿಗೆ ಗುದ್ದಿದ್ದು, ಬಸ್ನಲ್ಲಿದ್ದ 9 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ 27ಕ್ಕೂ ಹೆಚ್ಚು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.